ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ನಾಡಹಬ್ಬ ದಸರಾ ಆಚರಣೆ: ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ
ಬೆಂಗಳೂರು, 10 ಜುಲೈ (ಹಿ.ಸ.): ಆ್ಯಂಕರ್: ನಾಡಹಬ್ಬ ದಸರಾ-2026 ದೇಶ-ವಿದೇಶಗಳಲ್ಲಿ ಕರ್ನಾಟಕದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಅರ್ಥಪೂರ್ಣ ಹಾಗೂ ಅಂತಾರಾಷ್ಟ್ರೀಯ ಗುಣಮಟ್ಟದ ಮಹೋತ್ಸವವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ
ಜುಲೈ 1ರಿಂದ ಇದುವರೆಗೆ ಬೆಂಗಳೂರಿನಲ್ಲಿ 435 ಕಿ.ಮೀ. ಪಾದಚಾರಿ ಮಾರ್ಗಗಳಲ್ಲಿನ 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮುಂದುವರಿಯಲಿದ್ದು, ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ಸ್ಥಳ ಕಲ್ಪಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.


ಬೆಂಗಳೂರು, 10 ಜುಲೈ (ಹಿ.ಸ.):

ಆ್ಯಂಕರ್:

ನಾಡಹಬ್ಬ ದಸರಾ-2026 ದೇಶ-ವಿದೇಶಗಳಲ್ಲಿ ಕರ್ನಾಟಕದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಅರ್ಥಪೂರ್ಣ ಹಾಗೂ ಅಂತಾರಾಷ್ಟ್ರೀಯ ಗುಣಮಟ್ಟದ ಮಹೋತ್ಸವವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ನಾಡಹಬ್ಬ ದಸರಾ-2026ರ ಉನ್ನತ ಮಟ್ಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ನಿರ್ದೇಶನಗಳನ್ನು ನೀಡಿದರು.

ಮೈಸೂರು ದಸರಾ ನಮ್ಮ ರಾಜ್ಯದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ಮಹೋತ್ಸವವಾಗಿದೆ. ಅದರ ಘನತೆಗೆ ಯಾವುದೇ ಧಕ್ಕೆಯಾಗದಂತೆ ಕಾಲಕ್ಕೆ ತಕ್ಕ ಬದಲಾವಣೆಗಳನ್ನು ಅಳವಡಿಸಿಕೊಂಡು, ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು, ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಶಕ್ತಿ ಯೋಜನೆ ಜಾರಿಯಾದ ಬಳಿಕ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮೂಲಸೌಕರ್ಯ ಮತ್ತು ಸಾರ್ವಜನಿಕ ಸೌಲಭ್ಯಗಳನ್ನು ಮತ್ತಷ್ಟು ಬಲಪಡಿಸುವಂತೆ ಅವರು ಸೂಚಿಸಿದರು.

ರಾಷ್ಟ್ರಮಟ್ಟದ ಖ್ಯಾತಿಯ ಗಾಯಕರು, ಸಂಗೀತಗಾರರು ಹಾಗೂ ಕಲಾವಿದರನ್ನು ಆಹ್ವಾನಿಸಿ ಗುಣಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಪರಂಪರೆಯನ್ನು ಮುಂದುವರಿಸಬೇಕು ಎಂದು ತಿಳಿಸಿದರು.

ದಸರಾ ಆಯೋಜನಾ ಸಮಿತಿಗಳು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಉತ್ಸವದ ಯಶಸ್ಸನ್ನೇ ಪ್ರಮುಖ ಗುರಿಯನ್ನಾಗಿ ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ರೂಪುಗೊಂಡ ಉತ್ತಮ ಸಂಪ್ರದಾಯಗಳು ಹಾಗೂ ವ್ಯವಸ್ಥೆಗಳನ್ನು ಮುಂದುವರಿಸಿಕೊಂಡು ಹೋಗುವಂತೆ ಸೂಚಿಸಿದರು.

ದಸರಾ ಕುರಿತು ಟೀಕೆ-ವಿಮರ್ಶೆಗಳು ಸಹಜವಾಗಿದ್ದು, ಅವುಗಳಿಗೆ ಅತಿಯಾದ ಮಹತ್ವ ನೀಡದೆ ಜನರ ನಿರೀಕ್ಷೆಗೆ ತಕ್ಕಂತೆ ಅತ್ಯುತ್ತಮ ಉತ್ಸವ ಆಯೋಜಿಸುವತ್ತ ಗಮನಹರಿಸಬೇಕು. ಅಲ್ಲದೆ, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಸಚಿವರಾದ ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಸಂಸದ ಯದುವೀರ್ ಒಡೆಯರ್, ಮಾಜಿ ಸಚಿವ ಜಿ.ಟಿ. ದೇವೇಗೌಡ, ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ರಮೇಶ್ ಬಂಡಿಸಿದ್ದೇಗೌಡ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / SNEHA K


 rajesh pande