ಮೂರು ತಿಂಗಳಲ್ಲಿ ವಿಂಡ್ ಟನಲ್ ಜಂಕ್ಷನ್ ಅಂಡರ್ಪಾಸ್ ಪೂರ್ಣಗೊಳಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ
ಬೆಂಗಳೂರು, 10 ಜುಲೈ (ಹಿ.ಸ.): ಆ್ಯಂಕರ್: ಬೆಂಗಳೂರು ಹಳೆ ವಿಮಾನ ನಿಲ್ದಾಣ ರಸ್ತೆಯ ವಿಂಡ್ ಟನಲ್ ಜಂಕ್ಷನ್‌ನಲ್ಲಿ ₹19 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಂಡರ್‌ಪಾಸ್ ಕಾಮಗಾರಿಯನ್ನು ಮುಂದಿನ ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಗುತ್ತಿಗೆ
ವಿಂಡ್ ಟನಲ್ ಜಂಕ್ಷನ್ ಅಂಡರ್ಪಾಸ್ ಕಾಮಗಾರಿಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ.


ಬೆಂಗಳೂರು, 10 ಜುಲೈ (ಹಿ.ಸ.):

ಆ್ಯಂಕರ್:

ಬೆಂಗಳೂರು ಹಳೆ ವಿಮಾನ ನಿಲ್ದಾಣ ರಸ್ತೆಯ ವಿಂಡ್ ಟನಲ್ ಜಂಕ್ಷನ್‌ನಲ್ಲಿ ₹19 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಂಡರ್‌ಪಾಸ್ ಕಾಮಗಾರಿಯನ್ನು ಮುಂದಿನ ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

ಶುಕ್ರವಾರ ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಸಚಿವರು, ಕಾಮಗಾರಿಗೆ ವೇಗ ನೀಡಲು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಿದರು. ಉಳಿದ ಕಾಮಗಾರಿ ಅವಧಿಯಲ್ಲೂ ಸಾರ್ವಜನಿಕರಿಗೆ ಸಂಚಾರದ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಯೋಜನೆಗೆ ಸಂಬಂಧಿಸಿದ ಜಲಮಂಡಳಿ, ಬೆಸ್ಕಾಂ, ಒಳಚರಂಡಿ ಹಾಗೂ ಆಪ್ಟಿಕಲ್ ಫೈಬರ್ ಕೇಬಲ್ ಸೇರಿದಂತೆ ಎಲ್ಲಾ ಉಪಯುಕ್ತ ಸೇವೆಗಳ ಸ್ಥಳಾಂತರ ಕಾಮಗಾರಿ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಸುಮಾರು 300 ಮೀಟರ್ ಉದ್ದದ ನಾಲ್ಕು ಲೇನ್‌ಗಳ ಅಂಡರ್‌ಪಾಸ್ ಕಾಮಗಾರಿಯ ಶೇ.75ರಷ್ಟು ಭಾಗ ಈಗಾಗಲೇ ಪೂರ್ಣಗೊಂಡಿದ್ದು, ಉಳಿದ ಅವಧಿಯಲ್ಲಿ ತಾತ್ಕಾಲಿಕ ರಸ್ತೆ, ಪ್ರೀ-ಫ್ಯಾಬ್ರಿಕೇಟೆಡ್ ಬಾಕ್ಸ್ ರಚನೆ ಹಾಗೂ ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / SNEHA K


 rajesh pande