
ಹೊಸಪೇಟೆ, 11 ಜುಲೈ (ಹಿ.ಸ.):
ಆ್ಯಂಕರ್ : 2027-28ನೇ ಶೈಕ್ಷಣಿಕ ಸಾಲಿಗೆ ಜಿಲ್ಲೆಯ ಚಿಕ್ಕಜೋಗಿಹಳ್ಳಿಯಲ್ಲಿರುವ ಕೇಂದ್ರ ಶಿಕ್ಷಣ ಸಚಿವಾಲಯದ ಪಿಎಂ ಶ್ರೀ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಎನ್.ವಿ.ಎಸ್ ವೆಬ್ಸೈಟ್ https://navodaya.gov.in/ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ನವೆಂಬರ್ 28ರಂದು ಪರೀಕ್ಷೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9972202432, 9740120468, 9591960434, 9950194664 ಗೆ ಸಂಪರ್ಕಿಸಬಹುದು ಎಂದು ಪಿಎಂ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸುದೇಶ ಗೋಪಾಲ ಮಲಜುರೆ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್