ಸಾಯಿ ಮಧುಸೂದನ್ ವೈದ್ಯಕೀಯ ಆಸ್ಪತ್ರೆಯಲ್ಲಿ ರೊಬೊಟಿಕ್ ತಂತ್ರಜ್ಞಾನದ ಮೂಲಕ ಹೃದಯ ಶಸ್ತ್ರಚಿಕಿತ್ಸೆ
ಸಾಯಿ ಮಧುಸೂದನ್ ವೈದ್ಯಕೀಯ ಆಸ್ಪತ್ರೆಯಲ್ಲಿ ರೊಬೊಟಿಕ್ ತಂತ್ರಜ್ಞಾನದ ಮೂಲಕ ಹೃದಯ ಶಸ್ತçಚಿಕಿತ್ಸೆ
ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಸಾಹಿತ ಮಧುಸೂದನ್ ವೈದ್ಯಕೀಯ ಮತ್ತು ಸಂಶೋಧನಾ ಕೇಂದ್ರದಲ್ಲಿ ರಿಮೋಟ್ ರೊಬೊಟಿಕ್ ತಂತ್ರಜ್ಞಾನದ ಮೂಲಕ ಶನಿವಾರ ಹೃದಯ ಶಸ್ತçಚಿಕಿತ್ಸೆ ನಡೆಸಲಾಯಿತು.


ಕೋಲಾರ, ೧೧ ಜುಲೈ (ಹಿ.ಸ):

ಆ್ಯಂಕರ್ : ವೈದ್ಯಕೀಯ ರಂಗದಲ್ಲಿ ಭಾರತದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಐತಿಹಾಸಿಕ ಮೈಲಿಗಲ್ಲೊಂದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮ ಶನಿವಾರ ಸಾಕ್ಷಿಯಾಗಿದೆ. ಮುದ್ದೇನಹಳ್ಳಿಯ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಎರಡು ದಿನಗಳ ಪ್ರತಿಷ್ಠಿತ ‘ಅಂತಾರಾಷ್ಟ್ರೀಯ ಎಂಡೋಸ್ಕೋಪಿಕ್ ಮತ್ತು ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸಾ ಸಮ್ಮೇಳನ’ ಜುಲೈ ೧೧ರಂದು ಆರಂಭವಾಯಿತು. ದೇಶದಲ್ಲೇ ಸಂಪೂರ್ಣ ಉಚಿತ ವೈದ್ಯಕೀಯ ಶಿಕ್ಷಣ ಮತ್ತು ಸೇವೆ ನೀಡುವ ಆಸ್ಪತ್ರೆಯೊಂದರಲ್ಲಿ ಇಂತಹ ಹೈಟೆಕ್ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆಯಾಗಿರುವುದು ಇದೇ ಮೊದಲ ಬಾರಿಯಾಗಿದ್ದು, ಇದು ಇಡೀ ದೇಶವೇ ಹೆಮ್ಮೆಪಡುವ ವಿಷಯವಾಗಿದೆ.

‘ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್’ ಆಶ್ರಯದಲ್ಲಿ, ಮಣಿಪಾಲ್ ಆಸ್ಪತ್ರೆ ಹಾಗೂ ಎಸ್ಎಸ್ ಇನ್ನೋವೇಷನ್ಸ್ ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಈ ಸಮ್ಮೇಳನದಲ್ಲಿ ಅಮೆರಿಕ, ಚೀನಾ, ಗ್ರೀಸ್, ಬ್ರೆಜಿಲ್, ಜರ್ಮನಿ, ಉಕ್ರೇನ್ ಮತ್ತು ವಿಯೆಟ್ನಾಂ ಸೇರಿದಂತೆ ವಿಶ್ವದ ವಿವಿಧ ರಾಷ್ಟ್ರಗಳ ಮುಂಚೂಣಿಯ ಹೃದಯ ಶಸ್ತ್ರಚಿಕಿತ್ಸಾ ತಜ್ಞರು, ನುರಿತ ವೈದ್ಯರು ಹಾಗೂ ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ರಿಮೋಟ್ ತಂತ್ರಜ್ಞಾನ ಬಳಸಿ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ಈ ಸಂಸ್ಥೆ ಈಗಾಗಲೇ ದೇಶದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಇಲ್ಲಿನ ಸುಸಜ್ಜಿತ ಸೌಲಭ್ಯಗಳ ಮೂಲಕ ಈಗಾಗಲೇ ಮೂವರು ರೋಗಿಗಳಿಗೆ ಯಶಸ್ವಿಯಾಗಿ ರಿಮೋಟ್ ರೋಬೋಟಿಕ್ ಸರ್ಜರಿ ನಡೆಸಲಾಗಿದ್ದು, ಅವರು ಸಂಪೂರ್ಣ ಗುಣಮುಖರಾಗಿದ್ದಾರೆ. ಅಲ್ಲದೆ, ದೇಶದ ವಿವಿಧ ಭಾಗಗಳ ಸರ್ಜನ್ಗಳಿಗೆ ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ಉಚಿತವಾಗಿ ಪ್ರಾಯೋಗಿಕ ತರಬೇತಿ ನೀಡುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಈ ಸಂಸ್ಥೆ ಮಾಡುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande