32 ಫೋರೆನ್ಸಿಕ್ ವಾಹನ, 75 ಬೊಲೆರೋ ವಾಹನಗಳಿಗೆ ಸಿಎಂ ಚಾಲನೆ
ವಿಧಾನಸೌಧದಲ್ಲಿ 32 ಮೊಬೈಲ್ ಫೋರೆನ್ಸಿಕ್ ವ್ಯಾನ್ಗಳು ಮತ್ತು 75 ಬೊಲೆರೋ ವಾಹನಗಳನ್ನು ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪೊಲೀಸ್ ಇಲಾಖೆಯ ದಕ್ಷತೆ, ನಿಷ್ಠೆ ಮತ್ತು ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯನ್ನು ಪ್ರಶಂಸಿಸಿದರು.
107 ಹೊಸ ವಾಹನಗಳೊಂದಿಗೆ ರಾಜ್ಯ ಪೊಲೀಸ್ ಇಲಾಖೆಗೆ ಮತ್ತಷ್ಟು ಬಲ; ಪೊಲೀಸರ ಸೇವೆಯನ್ನು ಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆ


ಬೆಂಗಳೂರು, 11 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್ ವಾಹನಗಳು ಹಾಗೂ 75 ಬೊಲೆರೋ ವಾಹನಗಳನ್ನು ಜಿಲ್ಲಾ ಪೊಲೀಸ್ ಘಟಕಗಳಿಗೆ ಲೋಕಾರ್ಪಣೆ ಮಾಡಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ನಮ್ಮ ದೇಶ ನೆಮ್ಮದಿಯಿಂದ ಇರಲು ಸಾಧ್ಯವಾಗಿದೆ. ಪೊಲೀಸ್ ಇಲಾಖೆಗೆ ನೀಡುತ್ತಿರುವ ಈ ಹೊಸ ವಾಹನಗಳು ಸಿಬ್ಬಂದಿಗೆ ಮತ್ತಷ್ಟು ಶಕ್ತಿ ತುಂಬಲಿವೆ, ಎಂದು ಹೇಳಿದರು.

ಮಾದಕ ವಸ್ತುಗಳ ವಿರುದ್ಧ ಕರ್ನಾಟಕ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯನ್ನು ಶ್ಲಾಘಿಸಿದ ಅವರು, ಮಾದಕ ವಸ್ತುಗಳನ್ನು ಸೀಜ್ ಮಾಡಿ ಸಾವಿರಾರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿರುವುದು ಪೊಲೀಸ್ ಇಲಾಖೆಯ ದೊಡ್ಡ ಸಾಧನೆಯಾಗಿದೆ. ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕಾರಿಗಳ ಸಾಮರ್ಥ್ಯವನ್ನು ಇಡೀ ದೇಶವೇ ಕೊಂಡಾಡುತ್ತಿದೆ. ನಿಮ್ಮ ದಕ್ಷತೆ, ಕಾರ್ಯಪಡೆ ಮತ್ತು ನಿಷ್ಠೆಯಿಂದ ರಾಜ್ಯಕ್ಕೆ ಹೆಸರನ್ನು ತಂದಿದ್ದೀರಿ, ಎಂದು ಪ್ರಶಂಸಿಸಿದರು.

ಪೊಲೀಸ್ ಸಿಬ್ಬಂದಿಯ ಹಗಲು-ರಾತ್ರಿ ಸೇವೆಯನ್ನು ಸ್ಮರಿಸಿದ ಮುಖ್ಯಮಂತ್ರಿ, ಹಗಲು-ರಾತ್ರಿ ಕೆಲಸ ಮಾಡುವ ನಿಮ್ಮ ಪರವಾಗಿ ಸರ್ಕಾರ ಸದಾ ನಿಲ್ಲಲಿದೆ. ಜನರಿಗೆ ನಿಮ್ಮ ಮೇಲೆ ಇನ್ನಷ್ಟು ವಿಶ್ವಾಸ ಮೂಡುವ ರೀತಿಯಲ್ಲಿ ಕೆಲಸ ಮಾಡಿ. ಇಂದು ಎಲ್ಲಾ ಜಿಲ್ಲಾ ಘಟಕಗಳಿಗೆ ನೀಡುತ್ತಿರುವ ಬೊಲೆರೋ ವಾಹನಗಳು ಅಪರಾಧಿಗಳನ್ನು ಪತ್ತೆಹಚ್ಚುವ ಕಾರ್ಯಕ್ಕೆ ಹೆಚ್ಚಿನ ನೆರವಾಗಲಿ, ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ರಿಜ್ವಾನ್ ಅರ್ಷದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / SNEHA K


 rajesh pande