ಎಸ್ ಐಆರ್ ಪ್ರಕ್ರಿಯೆಯಲ್ಲಿ ನಾಯಕರೂ ಕಾರ್ಯನಿರ್ವಹಿಸಿ: ಬಸವರಾಜ ಬೊಮ್ಮಾಯಿ
ಗದಗ, 11 ಜುಲೈ (ಹಿ.ಸ.) ಆ್ಯಂಕರ್:- ಚುನಾವಣಾ ಕಾರ್ಯತಂತ್ರ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕೇವಲ ಬಿಎಲ್ಎಗಳ ಮೇಲೆ ನಂಬಿಕೆ ಇಟ್ಟು ಸುಮ್ಮನಿರಬಾರದು. ವಾರ್ಡ್ ಮಟ್ಟದ ಮೂಲ ಕಾರ್ಯಕರ್ತರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಕಾರ್ಯಾಕಾರಿಣಿ ಜವಾಬ್ದಾರಿಯುತ ನಾಯಕರು ನೇರವಾಗಿ ಕಣಕ್ಕಿಳಿದು
ಫೋಟೋ


ಗದಗ, 11 ಜುಲೈ (ಹಿ.ಸ.)

ಆ್ಯಂಕರ್:- ಚುನಾವಣಾ ಕಾರ್ಯತಂತ್ರ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕೇವಲ ಬಿಎಲ್ಎಗಳ ಮೇಲೆ ನಂಬಿಕೆ ಇಟ್ಟು ಸುಮ್ಮನಿರಬಾರದು. ವಾರ್ಡ್ ಮಟ್ಟದ ಮೂಲ ಕಾರ್ಯಕರ್ತರು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಕಾರ್ಯಾಕಾರಿಣಿ ಜವಾಬ್ದಾರಿಯುತ ನಾಯಕರು ನೇರವಾಗಿ ಕಣಕ್ಕಿಳಿದು ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಗದಗನ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲೆಯ ವತಿಯಿಂದ ಏರ್ಪಡಿಸಿದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ವಿರೋಧ ಪಕ್ಷವಾದ ಕಾಂಗ್ರೆಸ್ ನವರು ಕೇವಲ ಬಿಎಲ್ಒಗಳ ಮೇಲೆ ಅವಲಂಬಿತರಾಗದೆ, ಹೆಚ್ಚುವರಿಯಾಗಿ ಹತ್ತತ್ತು ಜನರನ್ನು ನಿಯೋಜಿಸಿ ಕೆಲಸ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಕೇವಲ ಸಭೆಗಳನ್ನು ಮಾಡುವುದಕ್ಕೆ ಸೀಮಿತವಾಗಬಾರದು. ಸಭೆಗೆ ಬರುವ ನಾಯಕರು ಫೀಲ್ಡ್ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಫೀಲ್ಡ್ ವರ್ಕ್ ಕಡ್ಡಾಯ

ಕಾರ್ಯ ಕಾರಿಣಿ ಸದಸ್ಯರು ಎಂದರೆ ಕೇವಲ ಜವಾಬ್ದಾರಿ ಹೊಂದಿರುವ ನಾಯಕರಷ್ಟೇ ಅಲ್ಲ, ಅವರು ಸ್ವತಃ ಫೀಲ್ಡ್ಗಿಳಿದು ಕೆಲಸ ಮಾಡಬೇಕು. ಫಾರ್ಮ್ಗಳನ್ನು ತುಂಬುವುದು, ತಂದೆ-ತಾಯಿ ಅಥವಾ ಕುಟುಂಬದ ಸದಸ್ಯರ ಹೆಸರುಗಳನ್ನು ಸೇರ್ಪಡೆ ಮಾಡುವುದು ಹಾಗೂ ತಿದ್ದುಪಡಿಗಳ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ನಮ್ಮ ಕಡೆಯ ಮತದಾರರು ಬೇರೆ ಕಡೆ ವಲಸೆ ಹೋಗಿದ್ದರೂ ಅಥವಾ ಬೆಂಗಳೂರಿನಲ್ಲೇ ಇದ್ದರೂ ಅವರ ಮತಗಳು ಪಟ್ಟಿಯಿಂದ ಕೈತಪ್ಪದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ತಂತ್ರಜ್ಞಾನದ ಬಳಕೆ

ಮತದಾರರ ಮಾಹಿತಿ ಹಾಗೂ ದಾಖಲೆಗಳನ್ನು ಸ್ಥಳದಲ್ಲೇ ಡಿಕ್ಲೇರ್ ಮಾಡಿಸಿ, ಸ್ಕ್ಯಾನ್ ಮಾಡಿಸುವ ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಕೇವಲ ಬಿಎಲ್ಎ 2 ಗಳ ಮೇಲಿನ ಅವಲಂಬನೆಯನ್ನು ಬಿಟ್ಟು, ನೀವೆಲ್ಲರೂ ವಾರ್ಡ್ ಮಟ್ಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ನಿರೀಕ್ಷಿತ ಯಶಸ್ಸು ಸಾಧ್ಯ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ರಾಜು ಕುರಡಗಿ, ಶಾಸಕರುಗಳಾದ ಸಿ.ಸಿ.ಪಾಟೀಲ್, ಡಾ.ಚಂದ್ರು ಲಮಾಣಿ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ ಸಂಕನೂರ, ಮಾಜಿ ಶಾಸಕರಾದ ಕಳಕಪ್ಪ ಬಂಡಿ ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande