
ಬೆಂಗಳೂರು, 11 ಜುಲೈ (ಹಿ.ಸ.):
ಆ್ಯಂಕರ್:
ಹೆಚ್ಚುತ್ತಿರುವ ಜನಸಂಖ್ಯೆಯಿಂದ ಉಂಟಾಗುವ ಸವಾಲುಗಳ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವುದೇ ವಿಶ್ವ ಜನಸಂಖ್ಯೆ ದಿನದ ಮುಖ್ಯ ಉದ್ದೇಶವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಸುಸ್ಥಿರ ಅಭಿವೃದ್ಧಿ, ಉತ್ತಮ ಆರೋಗ್ಯ, ಗುಣಮಟ್ಟದ ಶಿಕ್ಷಣ ಹಾಗೂ ಭವಿಷ್ಯದ ಪೀಳಿಗೆಗೆ ಅಗತ್ಯ ಸಂಪನ್ಮೂಲಗಳನ್ನು ಒದಗಿಸಲು ಜನಸಂಖ್ಯೆ ಬೆಳವಣಿಗೆಯ ಕುರಿತು ಜವಾಬ್ದಾರಿಯುತ ಅರಿವು ಅತ್ಯಗತ್ಯ ಎಂದು ಹೇಳಿದ್ದಾರೆ.
ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಕುರಿತು ಎಲ್ಲರೂ ಜಾಗೃತಿ ಮೂಡಿಸಿ, ಸುಸ್ಥಿರ ಭಾರತದ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ಅವರು ಕರೆ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.