
ಮೈಸೂರು, 11 ಜುಲೈ (ಹಿ.ಸ.):
ಆ್ಯಂಕರ್:
ಮೈಸೂರು ಪೊಲೀಸ್ ತರಬೇತಿ ಶಾಲೆಯ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸುಧಾರಿತ ಗಸ್ತು, ಬೀಟ್ ಕರ್ತವ್ಯ, ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ (ಎಲ್‌ಎಚ್‌ಬಿಎಸ್), ಆಸರೆ ಹಾಗೂ ಮನೆ-ಮನೆ ಪೊಲೀಸ್ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಮಾರ್ಗದರ್ಶನ ನೀಡಿದರು.
ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವುದು, ಕರ್ತವ್ಯ ನಿರ್ವಹಣೆಯಲ್ಲಿ ವೃತ್ತಿಪರತೆ, ಶಿಸ್ತು ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ಮಲ್ಲಿಕ್ ಸಿ., ನಾಗೇಶ್ ಎಲ್. ಸೇರಿದಂತೆ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.