ಪಿಆರ್ಸಿ ಸುತ್ತೋಲೆ ಹಿಂಪಡೆಯಲು ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹ
ಹುಬ್ಬಳ್ಳಿ, 11 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಶಾಸಕ ಮಹೇಶ್ ಟೆಂಗಿನಕಾಯಿ, ವಿವಾದಿತ ಪಿಆರ್‌ಸಿ ಸುತ್ತೋಲೆಯನ್ನು ರಾಜ್ಯ ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಮಹೇಶ ಟೆಂಗಿನಕಾಯಿ ಪತ್ರಿಕಾಗೋಷ್ಠಿ


ಹುಬ್ಬಳ್ಳಿ, 11 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಶಾಸಕ ಮಹೇಶ್ ಟೆಂಗಿನಕಾಯಿ, ವಿವಾದಿತ ಪಿಆರ್‌ಸಿ ಸುತ್ತೋಲೆಯನ್ನು ರಾಜ್ಯ ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತದಾರರ ಪಟ್ಟಿಯನ್ನು ವ್ಯವಸ್ಥಿತವಾಗಿ ತಿರುಚುತ್ತಿದ್ದು, ಮ್ಯಾಪಿಂಗ್ ಪ್ರಕ್ರಿಯೆಯಲ್ಲಿಯೂ ಅಕ್ರಮ ಎಸಗುತ್ತಿದೆ ಎಂದು ಆರೋಪಿಸಿದರು. ಪೌರತ್ವ ನಿರ್ಧರಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕಷ್ಟೇ ಇದ್ದರೂ, ಪಿಆರ್‌ಸಿ ಸುತ್ತೋಲೆಯ ಮೂಲಕ ಅಕ್ರಮ ವಲಸಿಗರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿದರು.

ರಾಜ್ಯದ ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯನ್ನು ಮರೆತು ರಾಜಕೀಯ ಟೀಕೆಗಳಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದ ಅವರು, ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಸರ್ಕಾರ ಪ್ರಾಮಾಣಿಕ ಕ್ರಮ ಕೈಗೊಳ್ಳಬೇಕು. ಜೊತೆಗೆ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸುವಂತೆ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಅರವಿಂದ ಬೆಲ್ಲದ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಹಾಗೂ ಇತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande