ಎಸ್ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಹನ್ನೆರಡನೇ ದಿನಕ್ಕೆ 11,89,919 ಗಣತಿ ನಮೂನೆ ವಿತರಣೆ
ಕೊಪ್ಪಳ, 12 ಜುಲೈ (ಹಿ.ಸ.): ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 11 ರ ಸಂಜೆ 06 ಗಂಟೆವರೆಗೆ ಒಟ್ಟು 11,89,919 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಚ
ಎಸ್ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಹನ್ನೆರಡನೇ ದಿನಕ್ಕೆ 11,89,919 ಗಣತಿ ನಮೂನೆ ವಿತರಣೆ


ಕೊಪ್ಪಳ, 12 ಜುಲೈ (ಹಿ.ಸ.):

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 11 ರ ಸಂಜೆ 06 ಗಂಟೆವರೆಗೆ ಒಟ್ಟು 11,89,919 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಗೆ ವಿತರಿಸಲಾಗಿರುತ್ತದೆ. ಇಲ್ಲಿಯವರೆಗೆ ಒಟ್ಟು 11,89,919 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿದ್ದು, 4,87,420 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande