
ಶಿವಮೊಗ್ಗ, 12 ಜುಲೈ (ಹಿ.ಸ.):
ಆ್ಯಂಕರ್:ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಯಲ್ಲಿ ಎಐಟಿಟಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಐಟಿಐ ಉತ್ತೀರ್ಣರಿಗೆ 4 ತಿಂಗಳ ಸಿಎನ್‌ಸಿ ಆಪರೇಟರ್ (ವರ್ಟಿಕಲ್ ಮಷಿನ್ನಿಂಗ್ ಸೆಂಟರ್), ಡಿಪ್ಲೊಮಾ/ಬಿಇ ಪದವೀಧರರಿಗೆ 4 ತಿಂಗಳ ಸಿಎನ್‌ಸಿ ಪ್ರೋಗ್ರಾಮರ್, ಪ್ರೊ-ಇ, ಆಟೋ ಕ್ಯಾಡ್ ಹಾಗೂ ಐಒಟಿ, ಎಸ್‌ಎಸ್‌ಎಲ್‌ಸಿ ಉತ್ತೀರ್ಣರಿಗೆ 4 ತಿಂಗಳ ಮಿಲ್ಲರ್/ಟರ್ನರ್ ಮತ್ತು 12 ತಿಂಗಳ ಟೂಲ್ ರೂಮ್ ಮಷಿನಿಸ್ಟ್ ತರಬೇತಿ ನೀಡಲಾಗುತ್ತದೆ.
ತರಬೇತಿ ಪೂರ್ಣಗೊಂಡ ಬಳಿಕ ತಾಂತ್ರಿಕ ಕೈಗಾರಿಕೆಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ₹2,500 ಶಿಷ್ಯವೇತನವೂ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ವಯಸ್ಸು, ವಿದ್ಯಾರ್ಹತೆ ಹಾಗೂ ಇತರ ದಾಖಲೆಗಳೊಂದಿಗೆ ಪ್ರಾಂಶುಪಾಲರು, ಜಿಟಿಟಿಸಿ, ಪ್ಲಾಟ್ ಸಂಖ್ಯೆ ಸಿಎ-38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ 08182-246054, 9448307027 ಹಾಗೂ 9449286543 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.