ಬಳ್ಳಾರಿ : ನಾಳೆ ವಿದ್ಯುತ್ ಕಡಿತ
ಬಳ್ಳಾರಿ, 12 ಜುಲೈ (ಹಿ.ಸ.): ಆ್ಯಂಕರ್ : ಬಳ್ಳಾರಿ ನಗರದ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳುತ್ತಿರುವುದರಿಂದ ಜು. 13 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು
ಬಳ್ಳಾರಿ : ನಾಳೆ ವಿದ್ಯುತ್ ಕಡಿತ


ಬಳ್ಳಾರಿ, 12 ಜುಲೈ (ಹಿ.ಸ.):

ಆ್ಯಂಕರ್ : ಬಳ್ಳಾರಿ ನಗರದ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳುತ್ತಿರುವುದರಿಂದ ಜು. 13 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಳ್ಳಾರಿಯ ನಗರ ಉಪವಿಭಾಗ-2ರ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳ ವಿವರ:

ಎಫ್ -8 ಫೀಡರ್ ವ್ಯಾಪ್ತಿ: ಬಸವೇಶ್ವರ ನಗರ, ಎಂ.ಆರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್. ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಾ ಸ್ವರಾಜ್ ಕಾಲೋನಿ, ವಾಜಪೇಯಿ ಲೇಔಟ್, ನೆಹರು ಕಾಲೋನಿ ಹಾಗೂ ಮೋಕಾ ರಸ್ತೆ ಸುತ್ತಮುತ್ತಲಿನ ಪ್ರದೇಶಗಳು.

ಈ ಅವಧಿಯಲ್ಲಿ ಸಾರ್ವಜನಿಕರು ವಿದ್ಯುತ್ ವ್ಯತ್ಯಯವನ್ನು ಗಮನಿಸಿ ಜೆಸ್ಕಾಂ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande