ಎಸ್ಐಆರ್ ಪ್ರಕ್ರಿಯೆಯಲ್ಲಿ ಖಾಯಂ ನಿವಾಸ ಪ್ರಮಾಣಪತ್ರ ನೀಡುವುದು ತಪ್ಪಲ್ಲ: ಜಿ. ಪರಮೇಶ್ವರ
ಬೆಂಗಳೂರು, 12 ಜುಲೈ (ಹಿ.ಸ.): ಆ್ಯಂಕರ್: ಚುನಾವಣಾ ಆಯೋಗದ ಎಸ್‌ಐಆರ್‌ (ವಿಶೇಷ ಸಮಗ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ 13 ದಾಖಲೆಗಳನ್ನು ಕೇಳಲಾಗುತ್ತಿದ್ದು, ಅದರಲ್ಲಿ ಸ್ವಂತ ಮನೆಯಲ್ಲಿ ವಾಸವಿರುವ ಬಗ್ಗೆ ಮಾಹಿತಿಯೂ ಇರುವುದರಿಂದ ರಾಜ್ಯ ಸರ್ಕಾರ ಖಾಯಂ ನಿವಾಸ ಪ್ರಮಾಣಪತ್ರ ನೀಡುತ್ತಿದೆ ಎಂದು ಉಪ ಮುಖ
DCM X post


ಬೆಂಗಳೂರು, 12 ಜುಲೈ (ಹಿ.ಸ.):

ಆ್ಯಂಕರ್:

ಚುನಾವಣಾ ಆಯೋಗದ ಎಸ್‌ಐಆರ್‌ (ವಿಶೇಷ ಸಮಗ್ರ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ 13 ದಾಖಲೆಗಳನ್ನು ಕೇಳಲಾಗುತ್ತಿದ್ದು, ಅದರಲ್ಲಿ ಸ್ವಂತ ಮನೆಯಲ್ಲಿ ವಾಸವಿರುವ ಬಗ್ಗೆ ಮಾಹಿತಿಯೂ ಇರುವುದರಿಂದ ರಾಜ್ಯ ಸರ್ಕಾರ ಖಾಯಂ ನಿವಾಸ ಪ್ರಮಾಣಪತ್ರ ನೀಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದ್ದಾರೆ.

ಆಧಾರ್‌ ಕಾರ್ಡ್‌ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಖಾಯಂ ನಿವಾಸ ಪ್ರಮಾಣಪತ್ರ ನೀಡಲಾಗುತ್ತಿದ್ದು, ಇದರಲ್ಲಿ ಯಾವುದೇ ತಪ್ಪಿಲ್ಲ. ಈ ವಿಚಾರದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಜಾತಿ ಪ್ರಮಾಣಪತ್ರದ ಕೊರತೆಯಿಂದ ಈಗಾಗಲೇ ಸುಮಾರು 50ರಿಂದ 60 ಸಾವಿರ ವಿದ್ಯಾರ್ಥಿಗಳು ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆ ಅನುಭವಿಸುತ್ತಿದ್ದಾರೆ. ಖಾಯಂ ನಿವಾಸ ಪ್ರಮಾಣಪತ್ರದಲ್ಲೇ ಜಾತಿಯ ವಿವರವನ್ನು ಉಲ್ಲೇಖಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ಎಕ್ಸ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande