
ಹಾವೇರಿ, 12 ಜುಲೈ (ಹಿ.ಸ.):
ಆ್ಯಂಕರ್:
ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ಕುರಿತು ನಡೆಯುತ್ತಿರುವ ಪರ-ವಿರೋಧದ ಚರ್ಚೆಗಳು ಸಹಜವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಈ ಕುರಿತು ಹಾವೇರಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಅಂತಿಮ ನಿರ್ಧಾರವನ್ನು ಮೈಸೂರು ದಸರಾ ಸಮಿತಿಯೇ ಕೈಗೊಳ್ಳಬೇಕಿದ್ದು, ಸಮಿತಿಯ ತೀರ್ಮಾನವೇ ಅಂತಿಮವಾಗಿರಲಿದೆ ಎಂದು ಅವರು ಸ್ಪಷ್ಟಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.