ಕಾಂಗ್ರೆಸ್ ಪಕ್ಷ ಸೇರಿದ ಕಾತ್ರಾಳ ಗ್ರಾಮದ ಬಿಜೆಪಿ ಮುಖಂಡರು
ವಿಜಯಪುರ, 12 ಜುಲೈ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಕಾತ್ರಾಳ ಗ್ರಾಮದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಎಲ್ಲ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನ
ಸೇರ್ಪಡೆ


ವಿಜಯಪುರ, 12 ಜುಲೈ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಕಾತ್ರಾಳ ಗ್ರಾಮದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಎಲ್ಲ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಕರೆ ನೀಡಿದರು.

ನಗರದಲ್ಲಿ ನಡೆದ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸರ್ವಜನರ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಹೊಂದಿರುವ ಪಕ್ಷವಾಗಿದೆ. ಹೊಸ ಕಾರ್ಯಕರ್ತರ ಸೇರ್ಪಡೆಯಿಂದ ಪಕ್ಷದ ಶಕ್ತಿ ಮತ್ತಷ್ಟು ವೃದ್ಧಿಯಾಗಲಿದ್ದು, ಹಿರಿಯರು ಹಾಗೂ ಹೊಸದಾಗಿ ಸೇರ್ಪಡೆಯಾದವರು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಗ್ರಾಮ ಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳು, ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಕಲ್ಯಾಣ ಕಾರ್ಯಕ್ರಮಗಳ ಮೂಲಕ ರಾಜ್ಯದ ಜನರ ವಿಶ್ವಾಸ ಗಳಿಸಿದ್ದು, ಪಕ್ಷದ ತತ್ವ-ಸಿದ್ಧಾಂತಗಳನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದು ಅವರು ಹೇಳಿದರು.

ಈ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಖಂಡರು ಮಾತನಾಡಿ, ರಾಜ್ಯ ಸರ್ಕಾರದ ಅಭಿವೃದ್ಧಿ ಪರ ನಿಲುವು, ಕೈಗಾರಿಕಾ ಕ್ಷೇತ್ರಕ್ಕೆ ನೀಡುತ್ತಿರುವ ಉತ್ತೇಜನ, ಮೂಲಸೌಲಭ್ಯಗಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಅಭಿವೃದ್ಧಿ ಕಾರ್ಯಗಳಿಂದ ಪ್ರೇರಿತರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇವೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಸಚಿವ ಎಂ. ಬಿ. ಪಾಟೀಲ ಹಾಗೂ ಶಾಸಕ ಸುನೀಲಗೌಡ ಪಾಟೀಲ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾತ್ರಾಳ ಗ್ರಾಮದ ಹಿರಿಯ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಡಾ. ಶ್ರೀಶೈಲ ಕೊಕಟನೂರ ಅವರು ತಮ್ಮ ಬೆಂಬಲಿಗರಾದ ಹಣಮಂತ ಕೊಕಟನೂರ, ಮಹದೇವ ಕೊಕಟನೂರ, ನಾಗಪ್ಪ ಕೊಕಟನೂರ, ಸಿದ್ರಾಯ ನ್ಯಾಮಗೌಡ, ಮಲ್ಲಿಕಾರ್ಜುನ ಬಾಡಗಿ, ರಾಮಪ್ಪ ಕೊಕಟನೂರ, ಸಿದ್ರಾಯ ಕೊಕಟನೂರ, ಭೀಮಪ್ಪ ದುಂಡಪ್ಪ ಕೊಕಟನೂರ ಸೇರಿದಂತೆ ಹಲವರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಶಾಸಕ ಸುನೀಲಗೌಡ ಪಾಟೀಲ ಅವರು ಪಕ್ಷದ ಶಾಲು ಹೊದಿಸಿ ಎಲ್ಲರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ. ಡಿ. ಪಡಸಲಗಿ, ಎಸ್. ಡಿ. ಗುಗ್ಗರಿ, ಬಾಳಪ್ಪ ಪಡಸಲಗಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಅಂಗಡಿ, ಮಾಜಿ ಸದಸ್ಯ ಇಮ್ತಿಯಾಜ್ ಜಮಾದಾರ, ಮಹಮ್ಮದಸಾಬ ಜಮಾದಾರ, ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯ ಲಾಲಸಾಬ ಜಮಾದಾರ, ಸುರೇಶ ಚಿಕ್ಕಲಕಿ, ಹಣಮಂತ ಗಲಗಲಿ, ಇಬ್ರಾಹಿಂ ಗುರಾಡಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande