ವೀರಶೈವ-ಲಿಂಗಾಯತ ಸಮಾಜವನ್ನು ಯಾರೂ ವಿಭಜಿಸಲು ಸಾಧ್ಯವಿಲ್ಲ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು, 12 ಜುಲೈ (ಹಿ.ಸ.): ಆ್ಯಂಕರ್: ವೀರಶೈವ-ಲಿಂಗಾಯತ ಸಮಾಜವನ್ನು ಯಾವುದೇ ಶಕ್ತಿ ಬೇರ್ಪಡಿಸಲು ಸಾಧ್ಯವಿಲ್ಲ. ನಾವು ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ನಮ್ಮ ಏಕತೆಯೇ ನಮ್ಮ ದೊಡ್ಡ ಶಕ್ತಿ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಬೆಂಗಳೂರಿನ ವಿಜಯನಗರದ ಸುಜ್ಞಾನ ಮಂದಿರದಲ್ಲಿ ಭಾನುವಾರ
ಖಂಡ್ರೆ


ಬೆಂಗಳೂರು, 12 ಜುಲೈ (ಹಿ.ಸ.):

ಆ್ಯಂಕರ್:

ವೀರಶೈವ-ಲಿಂಗಾಯತ ಸಮಾಜವನ್ನು ಯಾವುದೇ ಶಕ್ತಿ ಬೇರ್ಪಡಿಸಲು ಸಾಧ್ಯವಿಲ್ಲ. ನಾವು ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ನಮ್ಮ ಏಕತೆಯೇ ನಮ್ಮ ದೊಡ್ಡ ಶಕ್ತಿ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಬೆಂಗಳೂರಿನ ವಿಜಯನಗರದ ಸುಜ್ಞಾನ ಮಂದಿರದಲ್ಲಿ ಭಾನುವಾರ ನಡೆದ ವೀರಶೈವ ಲಿಂಗಾಯತ ಮಹಾಸಭೆಯ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ 800ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ಯುವಕರು ಕೇವಲ ಉದ್ಯೋಗ ಅರಸುವವರಾಗದೆ, ಉದ್ಯೋಗ ಸೃಷ್ಟಿಸುವವರಾಗಬೇಕು. ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಜ್ಞಾನ, ಕೌಶಲ್ಯ ಮತ್ತು ಹೊಸ ಆವಿಷ್ಕಾರಗಳ ಮೂಲಕ ದೇಶ ಕಟ್ಟುವ ಶಕ್ತಿಯಾಗಿ ಬೆಳೆಯಬೇಕು ಎಂದು ಕರೆ ನೀಡಿದರು.

ವೀರಶೈವ-ಲಿಂಗಾಯತ ಮಠಗಳು ಅನ್ನ, ಅಕ್ಷರ ಮತ್ತು ಆಶ್ರಯ ಎಂಬ ತ್ರಿವಿಧ ದಾಸೋಹದ ಮೂಲಕ ಸಮಾಜ ನಿರ್ಮಾಣದಲ್ಲಿ ಅಪಾರ ಕೊಡುಗೆ ನೀಡಿವೆ. ಬಸವಣ್ಣನವರ ಕಾಯಕವೇ ಕೈಲಾಸ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಸೇವೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಸಮಾಜದಿಂದ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಸೇರಿದಂತೆ ಉನ್ನತ ಹುದ್ದೆಗಳಿಗೆ ಯುವಕರು ಬರಬೇಕಿದ್ದು, ನಿವೃತ್ತ ಅಧಿಕಾರಿಗಳು ಮತ್ತು ಉದ್ಯಮಿಗಳು ಜಿಲ್ಲೆಗೊಂದು ತರಬೇತಿ ಕೇಂದ್ರ ಸ್ಥಾಪಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದು ಖಂಡ್ರೆ ಅಭಿಪ್ರಾಯಪಟ್ಟರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande