
ನವದೆಹಲಿ, 12 ಜುಲೈ (ಹಿ.ಸ.):
ಆ್ಯಂಕರ್:
ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶೋಕ ಸಂದೇಶ ಪ್ರಕಟಿಸಿರುವ ಪ್ರಧಾನಿ, ಪ್ರತಿಷ್ಠಿತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅಮ್ಮ ಅವರ ನಿಧನ ಸಂಗೀತ ಮತ್ತು ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಹಲವು ಭಾಷೆಗಳಲ್ಲಿ ಹಾಡಿದ ಗೀತೆಗಳು ತಲೆಮಾರುಗಳ ಮನಸ್ಸು ಗೆದ್ದಿವೆ. ತಮ್ಮ ಅಪರೂಪದ ಗಾಯನ ಶೈಲಿ ಹಾಗೂ ಬಹುಮುಖ ಪ್ರತಿಭೆಯಿಂದ ಪ್ರತಿಯೊಂದು ಭಾವನೆಗೂ ಧ್ವನಿಯಾಗಿದ್ದರು. ಅವರ ಸುಮಧುರ ಗೀತೆಗಳು ಮುಂದಿನ ಪೀಳಿಗೆಗಳನ್ನೂ ಮೋಡಿ ಮಾಡುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ.
ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದವರಿಗೆ, ಅಸಂಖ್ಯಾತ ಅಭಿಮಾನಿಗಳಿಗೆ ಹಾಗೂ ಇಡೀ ಸಂಗೀತ ಲೋಕಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.