ಜು.15 ಮತ್ತು ಜು.30 ರಂದು ವಿವಿಧ ಮರಗಳ ತೆರವಿಗೆ ಬಹಿರಂಗ ಹರಾಜು
ಹುಬ್ಬಳ್ಳಿ, 12 ಜುಲೈ (ಹಿ.ಸ.): ಆ್ಯಂಕರ್: ಹುಬ್ಬಳ್ಳಿ ಶಹರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಚೇರಿ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ 63 ಮರಗಳು ಮತ್ತು 50 ಮರದ ಟೊಂಗೆಗಳನ್ನು ತೆರುವುಗೊಳಿಸಲು ಹುಬ್ಬಳ್ಳಿ ವಲಯ ಅರಣ್ಯ ಅಧಿಕಾರಿ ಕಛೇರಿಯಲ್ಲಿ ಜುಲೈ 15, 2026 ಮತ್ತು ಜುಲೈ 30, 2
ಜು.15 ಮತ್ತು ಜು.30 ರಂದು ವಿವಿಧ ಮರಗಳ ತೆರವಿಗೆ ಬಹಿರಂಗ ಹರಾಜು


ಹುಬ್ಬಳ್ಳಿ, 12 ಜುಲೈ (ಹಿ.ಸ.):

ಆ್ಯಂಕರ್:

ಹುಬ್ಬಳ್ಳಿ ಶಹರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಚೇರಿ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ 63 ಮರಗಳು ಮತ್ತು 50 ಮರದ ಟೊಂಗೆಗಳನ್ನು ತೆರುವುಗೊಳಿಸಲು ಹುಬ್ಬಳ್ಳಿ ವಲಯ ಅರಣ್ಯ ಅಧಿಕಾರಿ ಕಛೇರಿಯಲ್ಲಿ ಜುಲೈ 15, 2026 ಮತ್ತು ಜುಲೈ 30, 2026 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು.

ಮರ ಸಂರಕ್ಷಣಾ ಕಾಯ್ದೆ 1976 ರ ಸೆಕ್ಷನ್ 8 (3) (ಗಿII) ರ ಸೆಕ್ಷನ್‍ಗಳಲ್ಲಿ ಅಗತ್ಯ ಪಡಿಸಿರುವಂತೆ ಈ ಬಗ್ಗೆ ತಕರಾರು ಸಲ್ಲಿಸ ಬಯಸುವವರು ತಮ್ಮ ತಕರಾರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಧಾರವಾಡ ಉಪ ವಿಭಾಗ, ಧಾರವಾಡ ಹಾಗೂ ಧಾರವಾಡದ ಕೆ.ಸಿ.ಪಾರ್ಕ ಎದುರು ಅರಣ್ಯ ಸಂಕೀರ್ಣದಲ್ಲಿರುವ ಮರ ಅಧಿಕಾರಿಯವರಿಗೆ ಲಿಖಿತ ರೂಪದಲ್ಲಿ ಜುಲೈ 13, 2026 ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande