ಎಸ್. ಜಾನಕಿ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂತಾಪ
ಬೆಂಗಳೂರು, 12 ಜುಲೈ (ಹಿ.ಸ.): ಆ್ಯಂಕರ್: ಖ್ಯಾತ ಹಿನ್ನೆಲೆ ಗಾಯಕಿ, ಸಂಗೀತ ಲೋಕದ ಗಾನಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹಾಗೂ ಕ್ಷೇತ್ರೀಯ ಸಂಘಚಾಲಕ ಡಾ. ಪಿ. ವಾಮನ್
Rss press release


ಬೆಂಗಳೂರು, 12 ಜುಲೈ (ಹಿ.ಸ.):

ಆ್ಯಂಕರ್:

ಖ್ಯಾತ ಹಿನ್ನೆಲೆ ಗಾಯಕಿ, ಸಂಗೀತ ಲೋಕದ ಗಾನಕೋಗಿಲೆ ಎಸ್. ಜಾನಕಿ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.

ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹಾಗೂ ಕ್ಷೇತ್ರೀಯ ಸಂಘಚಾಲಕ ಡಾ. ಪಿ. ವಾಮನ್ ಶೆಣೈ ಅವರು ಜಂಟಿಯಾಗಿ ಸಂತಾಪ ಸಂದೇಶ ಬಿಡುಗಡೆ ಮಾಡಿ, ದೇಶ ಕಂಡ ಮೇರು ಗಾಯಕಿಯ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಆರು ದಶಕಗಳ ಕಾಲ ವೈವಿಧ್ಯಮಯ ಗಾಯನದ ಮೂಲಕ ಸಂಗೀತ ಕ್ಷೇತ್ರದಲ್ಲಿ ಅಳಿಯದ ಛಾಪು ಮೂಡಿಸಿದ್ದ ಎಸ್. ಜಾನಕಿ ಅವರು ಎಳವೆಯಲ್ಲಿಯೇ ಸಂಗೀತದಲ್ಲಿ ಅಪೂರ್ವ ಪ್ರತಿಭೆ ಪ್ರದರ್ಶಿಸಿದ್ದರು. 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48 ಸಾವಿರಕ್ಕೂ ಅಧಿಕ ಹಾಡುಗಳಿಗೆ ಧ್ವನಿಯಾಗಿದ್ದ ಅವರು, ವಿವಿಧ ಭಾಷೆಗಳ ಮೇಲಿನ ಹಿಡಿತ, ನಿಖರ ಉಚ್ಚಾರಣೆ ಹಾಗೂ ವೈವಿಧ್ಯಮಯ ಗಾಯನ ಶೈಲಿಯಿಂದ ಅಸಾಮಾನ್ಯ ಗಾಯಕಿಯಾಗಿ ಗುರುತಿಸಿಕೊಂಡಿದ್ದರು ಎಂದು ಪ್ರಶಂಸಿಸಲಾಗಿದೆ.

ಅವರು ಹಾಡಿದ ಪ್ರತಿಯೊಂದು ಗೀತೆಯಲ್ಲೂ ಭಾವಜೀವ ತುಂಬಿದ್ದು, ಭಕ್ತಿಗೀತೆಗಳ ಮೂಲಕ ಕೋಟ್ಯಂತರ ಭಕ್ತರ ಮನಸ್ಸಿನಲ್ಲಿ ಆಧ್ಯಾತ್ಮಿಕ ಭಾವನೆಗಳನ್ನು ಮೂಡಿಸಿದ್ದರು. ಅವರ ನಿರಂತರ ಸಾಧನೆ, ಕಲಿಯುವ ಮನೋಭಾವ, ಸರಳ ಜೀವನಶೈಲಿ ಹಾಗೂ ದೈವಭಕ್ತಿ ಯುವಜನತೆಗೆ ಆದರ್ಶವಾಗಿದೆ ಎಂದು ಸಂಘ ತಿಳಿಸಿದೆ.

ಎಸ್. ಜಾನಕಿ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರವಾಗಿ ತೀವ್ರ ಸಂತಾಪ ವ್ಯಕ್ತಪಡಿಸಿರುವ ನಾಯಕರು, ಅವರ ಕುಟುಂಬದ ಸದಸ್ಯರು, ಅಭಿಮಾನಿಗಳು ಹಾಗೂ ಬಂಧುಮಿತ್ರರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಮತ್ತು ಅಗಲಿದ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande