ಗೃಹಲಕ್ಷ್ಮಿ ಯೋಜನೆ: ವದಂತಿಗೆ ನಂಬದಿರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೂಚನೆ
ಗೃಹಲಕ್ಷ್ಮಿ ಯೋಜನೆ: ವದಂತಿಗೆ ನಂಬದಿರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೂಚನೆ
ಗೃಹಲಕ್ಷ್ಮಿ ಯೋಜನೆ: ವದಂತಿಗೆ ನಂಬದಿರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೂಚನೆ


ಕೋಲಾರ: ಜುಲೈ ೮ (ಹಿ.ಸ.):

ಆ್ಯಂಕರ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಹೀಗಾಗಿ ಯಶಸ್ವಿಯಾಗಿ ಹಣ ಜಮೆಯಾಗುತ್ತಿರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕೋಲಾರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಎ.ಪಿ.ಎಲ್, ಬಿ.ಪಿ.ಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. ೨,೦೦೦/- ಗಳ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ೨೦೨೩ನೇ ಸಾಲಿನಿಂದÀ ಜಾರಿಗೆ ತರಲಾಗಿದೆ. ಕೋಲಾರ ಜಿಲ್ಲೆಯಲ್ಲಿ ಈ ಯೋಜನೆಗೆ ೩,೪೧,೮೪೬ ಫಲಾನುಭವಿಗಳ ಗುರಿ ನಿಗದಿಪಡಿಸಲಾಗಿದ್ದು, ಈಗಾಗಲೇ ನೋಂದಣಿಯಾಗಿರುವ ಫಲಾನುಭವಿಗಳಿಗೆ ೨೦೨೬ರ ಏಪ್ರಿಲ್ ತಿಂಗಳವರೆಗಿನ ಹಣವನ್ನು ಡಿ.ಬಿ.ಟಿ ಮೂಲಕ ಯಶಸ್ವಿಯಾಗಿ ಪಾವತಿಸಲಾಗಿದೆ.

ಆದರೆ ಇತ್ತೀಚೆಗೆ ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿನ ತಪ್ಪು ಮಾಹಿತಿಯ ಆಧಾರದ ಮೇಲೆ, ಗೃಹಲಕ್ಷ್ಮಿ ಯೋಜನೆಯಡಿ ಇ-ಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳಬೇಕೆಂದು ನಂಬಿ ಹಲವು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಿಗೆ ಮುಗಿಬೀಳುತ್ತಿರುವ ಬಗ್ಗೆ ಇಲಾಖೆಯ ಗಮನಕ್ಕೆ ಬಂದಿದೆ.

ಇಲ್ಲಿಯವರೆಗೆ ಇ-ಕೆವೈಸಿ ಅಪ್ಡೇಟ್ ಕುರಿತಂತೆ ಸರ್ಕಾರದಿಂದ ಯಾವುದೇ ರೀತಿಯ ಮಾರ್ಗಸೂಚಿ ಅಥವಾ ಅಧಿಕೃತ ಸೂಚನೆ ಬಿಡುಗಡೆಯಾಗಿಲ್ಲ. ಆದ್ದರಿಂದ ಪ್ರಸ್ತುತ ಯಾವುದೇ ಅಡಚಣೆಯಿಲ್ಲದೆ ಬ್ಯಾಂಕ್ ಖಾತೆಗೆ ಹಣ ಬರುತ್ತಿರುವ ಫಲಾನುಭವಿಗಳು ಇಂತಹ ವದಂತಿಗಳಿಗೆ ಕಿವಿಗೊಡಬಾರದು. ವಿನಾಕಾರಣ ಸೈಬರ್ ಸೆಂಟರ್ಗಳಿಗೆ ಅಲೆದಾಡಿ ನೋಂದಣಿ ಮಾಡಿಸಿಕೊಳ್ಳುವ ಗೋಜಿಗೆ ಹೋಗಬಾರದು ಎಂದು ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande