
ಶಿವಮೊಗ್ಗ, 12 ಜುಲೈ (ಹಿ.ಸ.):
ಆ್ಯಂಕರ್:
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ನಾಳೆ ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ 'ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್' ಸಂಸ್ಥೆಯು ಭಾಗವಹಿಸುತ್ತಿದ್ದು, ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ತೇರ್ಗಡೆ ಹೊಂದಿರುವ, 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಸಂದರ್ಶನಕ್ಕೆ ಪ್ರವೇಶ ಉಚಿತವಾಗಿರುತ್ತದೆ.
ನೇರ ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.