11ನೇ ರಾಷ್ಟ್ರೀಯ ಒಬಿಸಿ ಮಹಾಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ಗೆ ಆಹ್ವಾನ
ಬೆಂಗಳೂರು, 13 ಜುಲೈ (ಹಿ.ಸ.): ಆ್ಯಂಕರ್: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ, ಆಗಸ್ಟ್ 7ರಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾ
Invite


ಬೆಂಗಳೂರು, 13 ಜುಲೈ (ಹಿ.ಸ.):

ಆ್ಯಂಕರ್:

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ ನಿಯೋಗವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ, ಆಗಸ್ಟ್ 7ರಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿರುವ 11ನೇ ರಾಷ್ಟ್ರೀಯ ಒಬಿಸಿ ಮಹಾಸಮ್ಮೇಳನಕ್ಕೆ ಅಧಿಕೃತ ಆಹ್ವಾನ ನೀಡಿತು.

ದೇಶದ ವಿವಿಧ ರಾಜ್ಯಗಳ ಹಿಂದುಳಿದ ವರ್ಗಗಳ ಪ್ರತಿನಿಧಿಗಳು ಭಾಗವಹಿಸಲಿರುವ ಈ ಮಹಾಸಮ್ಮೇಳನದಲ್ಲಿ ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಸಬಲೀಕರಣ, ಮೀಸಲಾತಿ ಸೇರಿದಂತೆ ಸಮಕಾಲೀನ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ನಿಯೋಗವು ಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಯೋಗದ ಆಹ್ವಾನವನ್ನು ಸ್ವೀಕರಿಸಿ, ಮಹಾಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ನಿಯೋಗದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ ಅಧ್ಯಕ್ಷ ಡಾ. ಬಾಬನ್ ರಾವ್ ತಾಯ್ವಾಡೆ, ಪ್ರಧಾನ ಕಾರ್ಯದರ್ಶಿ ಸಚಿನ್ ರಾಜುರ್ಕರ್, ಕರ್ನಾಟಕದ ಸಂಘಟಕ ಲಕ್ಷ್ಮಣ್ ಯಾದವ್ ಕುರ್ರಾ, ತೆಲಂಗಾಣ ಹಾಗೂ ಆಂಧ್ರ ಪ್ರದೇಶ ಹಿಂದುಳಿದ ವರ್ಗಗಳ ಕಲ್ಯಾಣ ಸಂಘದ ಮುಖ್ಯಸ್ಥ ಜಜುಲ ಶ್ರೀನಿವಾಸ್ ಗೌಡ್, ಆಂಧ್ರ ಪ್ರದೇಶ ಹಿಂದುಳಿದ ವರ್ಗಗಳ ಕಲ್ಯಾಣ ಸಂಘದ ಮುಖ್ಯಸ್ಥ ಕೊಸನ ಶಂಕರ್ ರಾವ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande