ಸಮಾಜದ ಅಭಿವೃದ್ಧಿಗೆ ಸೇವಾ ಮನೋಭಾವ ಅತ್ಯಗತ್ಯ: ಡಾ. ಸಿ.ಎಚ್.ವಿ.ಎಸ್.ವಿ. ಪ್ರಸಾದ್
ಹುಬ್ಬಳ್ಳಿ, 13 ಜುಲೈ (ಹಿ.ಸ.): ಆ್ಯಂಕರ್: ಸಮಾಜದ ಅಭಿವೃದ್ಧಿಗೆ ಸೇವಾ ಮನೋಭಾವ ಅತ್ಯಗತ್ಯವಾಗಿದ್ದು, ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಸಂಘ-ಸಂಸ್ಥೆಗಳು ಹಾಗೂ ಕಾರ್ಯಕರ್ತರಿಗೆ ಎಲ್ಲರೂ ಸಮಯೋಚಿತ ಸಹಾಯ-ಸಹಕಾರ ನೀಡಬೇಕು ಎಂದು ಸ್ವರ್ಣ ಗ್ರೂಪ್ ಆಫ್ ಕಂಪನಿಯ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿ.ಎಚ್.ವಿ.
ಪದಗ್ರಹಣ


ಹುಬ್ಬಳ್ಳಿ, 13 ಜುಲೈ (ಹಿ.ಸ.):

ಆ್ಯಂಕರ್:

ಸಮಾಜದ ಅಭಿವೃದ್ಧಿಗೆ ಸೇವಾ ಮನೋಭಾವ ಅತ್ಯಗತ್ಯವಾಗಿದ್ದು, ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಸಂಘ-ಸಂಸ್ಥೆಗಳು ಹಾಗೂ ಕಾರ್ಯಕರ್ತರಿಗೆ ಎಲ್ಲರೂ ಸಮಯೋಚಿತ ಸಹಾಯ-ಸಹಕಾರ ನೀಡಬೇಕು ಎಂದು ಸ್ವರ್ಣ ಗ್ರೂಪ್ ಆಫ್ ಕಂಪನಿಯ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿ.ಎಚ್.ವಿ.ಎಸ್.ವಿ. ಪ್ರಸಾದ್ ಹೇಳಿದರು.

ನಗರದ ಕರ್ನಾಟಕ ಜಿಮಖಾನಾ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೋಟರಿ ಸಂಸ್ಥೆಗಳು ಶಿಕ್ಷಣ, ಆರೋಗ್ಯ ಹಾಗೂ ಮಾನವೀಯ ಸೇವೆಗಳ ಮೂಲಕ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡುತ್ತಿದ್ದು, ಇಂತಹ ಸೇವಾ ಚಟುವಟಿಕೆಗಳು ಇನ್ನಷ್ಟು ವಿಸ್ತಾರಗೊಳ್ಳಬೇಕೆಂದು ಆಶಿಸಿದರು.

ಕಳೆದ ಐದು ವರ್ಷಗಳಿಂದ ರೋಟರಿ ಕ್ಲಬ್‌ನೊಂದಿಗೆ ನಿಕಟ ಸಂಪರ್ಕ ಹೊಂದಿರುವುದಾಗಿ ತಿಳಿಸಿದ ಅವರು, ಮುಂದಿನ ದಿನಗಳಲ್ಲಿಯೂ ಕ್ಲಬ್‌ನ ಸಮಾಜಮುಖಿ ಕಾರ್ಯಗಳಿಗೆ ತಮ್ಮಿಂದಾಗುವ ಸಹಕಾರ ಮುಂದುವರಿಸುವುದಾಗಿ ಹೇಳಿದರು. ಇದೇ ಸಂದರ್ಭದಲ್ಲಿ ಸ್ವರ್ಣ ಸಮೂಹ ಸಂಸ್ಥೆಯ ವತಿಯಿಂದ ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆಗೆ ಕಂಪ್ಯೂಟರ್‌ಗಳನ್ನು ದೇಣಿಗೆಯಾಗಿ ನೀಡಿದರು. ಅಲ್ಲದೆ, ವಿದ್ಯಾನಗರದ ರೋಟರಿ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಯ ಮೂವರು ಶಿಕ್ಷಕರಿಗೆ ಒಂದು ವರ್ಷದ ವೇತನದ ನೆರವು ಹಾಗೂ ಮೂವರು ನರ್ಸಿಂಗ್ ವಿದ್ಯಾರ್ಥಿಗಳ ಕಾಲೇಜು ಶುಲ್ಕದ ಚೆಕ್‌ಗಳನ್ನು ವಿತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಜಿಲ್ಲೆ 3170ರ ಜಿಲ್ಲಾಧ್ಯಕ್ಷ ಡಾ. ಲೆನ್ನಿ ಡೆ ಕೋಸ್ಟಾ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ ಕುರಹಟ್ಟಿ, ಕಾರ್ಯದರ್ಶಿಯಾಗಿ ಆಯ್ಕೆಯಾದ ಸಂಜಯ ಪೀರಾಪುರ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಬೋಧಿಸಿದರು. ಇದೇ ವೇಳೆ ಕ್ಲಬ್‌ಗೆ ಸೇರ್ಪಡೆಯಾದ 25ಕ್ಕೂ ಹೆಚ್ಚು ಹೊಸ ರೋಟೇರಿಯನ್ ಸದಸ್ಯರನ್ನು ಸ್ವಾಗತಿಸಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಐಬಿಎಂಆರ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ವಿನಯಚಂದ್ರ ಮಹೇಂದ್ರಕರ ಸೇರಿದಂತೆ ಹಲವು ಗಣ್ಯರನ್ನು ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande