ಬಳ್ಳಾರಿ : ಪ್ಯೂಪಲ್ ಟ್ರೀ ಅಕ್ರಮಗಳ ತನಿಖೆಗೆ ಎಬಿವಿಪಿ ಆಗ್ರಹ
ಬಳ್ಳಾರಿ, 13 ಜುಲೈ (ಹಿ.ಸ.) ಆ್ಯಂಕರ್ : ಬಳ್ಳಾರಿಯ ಪ್ಯೂಪಿಲ್ ಟ್ರೀ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಚಟುವಟಿಕೆಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೋರಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಳ್ಳಾರಿ ಘಟಕ ಜಿಲ್ಲಾ ಪೋಲಿಸರಿಗೆ ಸೋಮವಾ
ಬಳ್ಳಾರಿ : ಪ್ಯೂಪಲ್ ಟ್ರೀ ಅಕ್ರಮಗಳ ತನಿಖೆಗೆ ಎಬಿವಿಪಿ ಆಗ್ರಹ


ಬಳ್ಳಾರಿ, 13 ಜುಲೈ (ಹಿ.ಸ.)

ಆ್ಯಂಕರ್ : ಬಳ್ಳಾರಿಯ ಪ್ಯೂಪಿಲ್ ಟ್ರೀ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಚಟುವಟಿಕೆಗಳ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೋರಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಳ್ಳಾರಿ ಘಟಕ ಜಿಲ್ಲಾ

ಪೋಲಿಸರಿಗೆ ಸೋಮವಾರ ಮನವಿ ಸಲ್ಲಿಸಿದೆ.

ಯಾವುದೇ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸುರಕ್ಷತೆ, ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು, ಗೌರವ ಮತ್ತು ಸಮಗ್ರ ಹಿತಾಸಕ್ತಿಯನ್ನು ಕಾಪಾಡುವುದು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಮುಖ್ಯ ಮತ್ತು ಪ್ರಮುಖ ಜವಾಬ್ದಾರಿ. ಆದರೆ, ಪ್ಯೂಪಿಲ್ ಟ್ರೀ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ, ಕಿರುಕುಳ ಹಾಗೂ ಇನ್ನಿತರೆ ಅಪರಾಧ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿದ್ದರೂ ಪೊಲೀಸರು ಸಮಗ್ರ ತನಿಖೆ ನಡೆಸದೇ ಇರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ ಎಂದರು.

ಪ್ರಕರಣದ ಕುರಿತು ಸಮಗ್ರ ನಿಪಕ್ಷಪಾತ ಮತ್ತು ತ್ವರಿತ ತನಿಖೆ ನಡೆಸಬೇಕು. ತನಿಖೆಯಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಲ್ಲಿ ವಿರುದ್ಧ ಅಪರಾಧ ದೃಢಪಟ್ಟಲ್ಲಿ ಕಾನೂನಿನ ಪ್ರಕರಣ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ಸುಮನ್ ಡಿ. ಪೆನ್ನೇಕರ್ ಅವರಿಗೆ ಮನವಿ ಸಲ್ಲಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande