
ಬಳ್ಳಾರಿ, 13 ಜುಲೈ (ಹಿ.ಸ.):
ಆ್ಯಂಕರ್ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜುಲೈ 15ರ ಬುಧವಾರ ಬಳ್ಳಾರಿ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.
ಈ ಕುರಿತು ಬಳ್ಳಾರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ಕುಮಾರ್ ಮೋಕಾ ಅವರು ಮಾಹಿತಿ ನೀಡಿದ್ದು, ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಂದು ಬೆಳಗ್ಗೆ 10.30 ಕ್ಕೆ ಸುದ್ದಿಗೋಷ್ಠಿ ನಡೆಸುವ ಬಿ.ವೈ. ವಿಜಯೇಂದ್ರ ಅವರು ಪಕ್ಷದ ಸಂಘಟನೆ ಮತ್ತು ಇನ್ನಿತರೆ ವಿಷಯಗಳ ಕುರಿತು ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ವಿವಿಧ ಮುಖಂಡರು - ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್