ರಾಜ್ಯದಲ್ಲಿ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆಗೆ ಆದೇಶ
ಬೆಂಗಳೂರು, 13 ಜುಲೈ (ಹಿ.ಸ.): ಆ್ಯಂಕರ್: ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯಾದ್ಯಂತ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ
ಆದೇಶ ಪ್ರತಿ


ಬೆಂಗಳೂರು, 13 ಜುಲೈ (ಹಿ.ಸ.):

ಆ್ಯಂಕರ್:

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯಾದ್ಯಂತ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಈ ಯೋಜನೆ ಜಾರಿಗೊಳ್ಳಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳು ಸಹಕಾರ ನೀಡಲಿವೆ.

ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಂಘ, ಪಟ್ಟಣ ಪಂಚಾಯಿತಿಗಳಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪುರಸಭೆಗಳಲ್ಲಿ 6 ಸಾವಿರ ಜನಸಂಖ್ಯೆಗೆ ಒಂದು ಸಂಘ, ನಗರಸಭೆಗಳಲ್ಲಿ 8 ಸಾವಿರ ಜನಸಂಖ್ಯೆಗೆ ಒಂದು ಸಂಘ ಹಾಗೂ ಮಹಾನಗರ ಪಾಲಿಕೆ ಮತ್ತು ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 10 ಸಾವಿರ ಜನಸಂಖ್ಯೆಗೆ ಒಂದು ಸಂಘ ಸ್ಥಾಪಿಸಲಾಗುವುದು.

ಪ್ರತಿ ಸಂಘಕ್ಕೆ ಒಬ್ಬ ತರಬೇತುದಾರರನ್ನು ನೇಮಿಸಿ ಅವರಿಗೆ ವಾರ್ಷಿಕ ₹24 ಸಾವಿರ ಗೌರವಧನ ನೀಡಲಾಗುವುದು. ಅಲ್ಲದೆ, ಪ್ರತಿ ಸಂಘದ ಚಟುವಟಿಕೆಗಳಿಗಾಗಿ ವಾರ್ಷಿಕ ₹10 ಲಕ್ಷ ಅನುದಾನ ಒದಗಿಸಲಾಗುವುದು.

ಈ ಯೋಜನೆಯ ಮೂಲಕ ಯುವಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿ, ಅವರನ್ನು ಸಬಲೀಕರಣಗೊಳಿಸಿ ಸಮಾಜಮುಖಿ ಹಾಗೂ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವುದು ಸರ್ಕಾರದ ಉದ್ದೇಶ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande