


ಬಳ್ಳಾರಿ, 13 ಜುಲೈ (ಹಿ.ಸ.):
ಆ್ಯಂಕರ್ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೆಲಸ ಮಾಡಿರುವವರ ಮೇ ಮತ್ತು ಜೂನ್ ತಿಂಗಳ ಬಾಕಿ ಕೂಲಿ ವೇತನವನ್ನು ಕೂಡಲೇ ಪಾವತಿಸಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘದ ಬಳ್ಳಾರಿ ಜಿಲ್ಲಾ ಘಟಕವು ಬಳ್ಳಾರಿ ಜಿಲ್ಲಾ ಪಂಚಾಯಿತಿ ಬಳಿ ಸೋಮವಾರ ಬೃಹತ್ ಪ್ರತಿಭಟನೆ ಮಾಡಿ, ಮನವಿ ಸಲ್ಲಿಸಿದೆ.
ಕೂಲಿ ಕಾರ್ಮಿಕರ ಕೂಲಿ ಪಾವತಿಯಲ್ಲಿ ಉಂಟಾಗಿರುವ ವಿಳಂಬದಿಂದ ಗ್ರಾಮೀಣ ಕಾರ್ಮಿಕರು ಮತ್ತು ಅವರ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ಕಾರಣ ಕೇಂದ್ರ ಮತ್ತು ರಾಜ್ಯ ತಕ್ಷಣವೇ ಬಾಕಿ ವೇತನವನ್ನು ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘದ ರಾಜ್ಯ ಸಮಿತಿ ಸದಸ್ಯ ಈ. ಹನುಮಂತಪ್ಪ, ಜಿಲ್ಲಾ ಅಧ್ಯಕ್ಷ ಗೋವಿಂದ್, ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ಜಂಟಿ ಕಾರ್ಯದರ್ಶಿ ಕಾಸಿಂಸಾಬ್, ನರೇಗಾ ಉಳಿಸಿ ಸಮಿತಿ ತಾಲ್ಲೂಕು ಅಧ್ಯಕ್ಷ ಕಲ್ಲುಕಂಬ ಪಂಪಾಪತಿ, ಯುವಜನ ಮುಖಂಡ ಕೋಳೂರು ಪಂಪಾಪತಿ, ಕುರುಗೋಡು ತಾಲ್ಲೂಕು ಕಾರ್ಯದರ್ಶಿ ಎಚ್.ಎನ್. ಬಸವರಾಜ್, ಬಳ್ಳಾರಿ ತಾಲ್ಲೂಕು ಕಾರ್ಯದರ್ಶಿ ಧನರಾಜ್, ಜಿಲ್ಲಾ ಸಮಿತಿ ಸದಸ್ಯರಾದ ಹೊನ್ನೂರಪ್ಪ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್