ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ:ಅರ್ಜಿ ಆಹ್ವಾನ
ಬಳ್ಳಾರಿ, 13 ಜುಲೈ (ಹಿ.ಸ.) ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ
ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ:ಅರ್ಜಿ ಆಹ್ವಾನ


ಬಳ್ಳಾರಿ, 13 ಜುಲೈ (ಹಿ.ಸ.)

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ವಿದ್ಯಾರ್ಥಿಗಳು ರಾಜ್ಯ ಸ್ಕಾಲರ್ಶಿಪ್ ಪೋರ್ಟಲ್ನ ವೆಬ್ಸೈಟ್ www.sw.kar.nic.in ಗೆ ಭೇಟಿ ನೀಡಿ ಪ್ರಿ ಮೆಟ್ರಿಕ್ ಮತ್ತು ಪೋಸ್ಟ್ ಮೆಟ್ರಿಕ್ ಸ್ಕಾಲರ್ ಶಿಪ್ ಆಯ್ಕೆ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ.

*ಬೇಕಾಗುವ ಅಗತ್ಯ ದಾಖಲೆ:*

ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್, ಸ್ಯಾಟ್ಸ್ ಐಡಿ ಹಾಗೂ ಇತರೆ ದಾಖಲೆ.

ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ವಾರ್ಷಿಕ ಆದಾಯ ರೂ.2.50 ಲಕ್ಷ ಮಿತಿಯೊಳಗಿರುವ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಖೋಟಾದಡಿ ಸಿಇಟಿ/ನೀಟ್ ಮುಖಾಂತರ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ಮಿತಿ ರೂ.10 ಲಕ್ಷ ಇರುವವರು ಸಹ ಅರ್ಜಿ ಸಲ್ಲಿಸಬಹುದು.

*ಬೇಕಾದ ಅಗತ್ಯ ದಾಖಲೆ:*

ಸ್ಯಾಟ್ಸ್ ಐಡಿ, ಎಸ್ಎಸ್ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಹಾಗೂ ಇತರೆ ದಾಖಲೆ.

ಅರ್ಜಿ ಸಲ್ಲಿಸಲು 2027 ರ ಜನವರಿ 01 ಕೊನೆಯ ದಿನ ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಕೌಲ್ ಬಜಾರ್ 1 ನೇ ಗೇಟ್ ಹತ್ತಿರ ಡಾ.ಬಿ.ಆರ್ ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೊ.9480843073 ಗೆ ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande