
ಬೆಳಗಾವಿ, 13 ಜುಲೈ (ಹಿ.ಸ.):
ಆ್ಯಂಕರ್:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಂತರಿಕ ನೇಮಕಾತಿ ಪಡೆದ 62 ಗ್ರಾಮ ಪಂಚಾಯತ್ ಸಿಬ್ಬಂದಿಗೆ ನೇಮಕಾತಿ ಆದೇಶಗಳನ್ನು ವಿತರಿಸಿದರು.
ಕರ ವಸೂಲಿಗಾರರು ಹಾಗೂ ಕ್ಲರ್ಕ್/ಕ್ಲರ್ಕ್-ಕಂ-ಡಾಟಾ ಎಂಟ್ರಿ ಆಪರೇಟರ್ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಬಡ್ತಿ ಆಧಾರಿತ ಆಂತರಿಕ ನೇಮಕಾತಿ ಪಡೆದ ಸಿಬ್ಬಂದಿಗೆ ಸಚಿವರು ಆದೇಶ ಪತ್ರಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಗ್ರಾಮೀಣ ಜನತೆಗೆ ಇನ್ನಷ್ಟು ಪರಿಣಾಮಕಾರಿ ಸೇವೆ ಸಲ್ಲಿಸಬೇಕು. ಗ್ರಾಮ ಪಂಚಾಯತ್‌ಗಳ ಆಡಳಿತವನ್ನು ಬಲಪಡಿಸುವ ಮೂಲಕ ಗ್ರಾಮೀಣಾಭಿವೃದ್ಧಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.