ರಾಮಮಂದಿರ ಕಾಣಿಕೆ ಪ್ರಕರಣ: ಎಸ್ಐಟಿ ದಾಖಲೆಗಳನ್ನು ಕೇಳಿದ ಸುಪ್ರೀಂ ಕೋರ್ಟ್
ನವದೆಹಲಿ, 13 ಜುಲೈ (ಹಿ.ಸ.): ಆ್ಯಂಕರ್: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ಕಾಣಿಕೆ ಹಣದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಉತ್ತರ ಪ್ರದೇಶ ಸರ್ಕಾರ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ
SC file photo


ನವದೆಹಲಿ, 13 ಜುಲೈ (ಹಿ.ಸ.):

ಆ್ಯಂಕರ್:

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ಕಾಣಿಕೆ ಹಣದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಉತ್ತರ ಪ್ರದೇಶ ಸರ್ಕಾರ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ, ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 20ಕ್ಕೆ ನಿಗದಿಪಡಿಸಲಾಗಿದೆ.

ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಎಸ್‌ಐಟಿ ತನಿಖೆಯ ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವಕೀಲರಾದ ಅಜಯ್ ಕುಮಾರ್ ರೈ ಹಾಗೂ ದಿನೇಶ್ ಕುಮಾರ್ ಯಾದವ್ ಸಲ್ಲಿಸಿರುವ ಅರ್ಜಿಯಲ್ಲಿ, ದೇವಸ್ಥಾನದ ಕಾಣಿಕೆ ಹಣದ ನಿರ್ವಹಣೆಯಲ್ಲಿ ಪಾರದರ್ಶಕ ವ್ಯವಸ್ಥೆ ರೂಪಿಸಲು ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಹಾಗೂ ಟ್ರಸ್ಟ್‌ಗೆ ನಿರ್ದೇಶನ ನೀಡುವಂತೆ ಕೋರಲಾಗಿದೆ. ಕಾಣಿಕೆ ಹಣದಲ್ಲಿ ಅಕ್ರಮ ನಡೆದಿದೆ ಎಂಬ ಸುದ್ದಿಯಿಂದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿಯಲ್ಲಿ ಲಖನೌ ವಿಭಾಗೀಯ ಆಯುಕ್ತ ವಿಜಯ ವಿಶ್ವಾಸ್ ಪಂತ್, ಐಜಿಪಿ ಕಿರಣ್ ಎಸ್ ಮತ್ತು ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿ ನೀಲ್ ರತನ್ ಸದಸ್ಯರಾಗಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande