ಎಸ್ಐಆರ್ ನಮೂನೆಗಳನ್ನು ನಿಗದಿತ ಅವಧಿಯಲ್ಲಿ ಸಲ್ಲಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
ಧಾರವಾಡ, 13 ಜುಲೈ (ಹಿ.ಸ.): ಆ್ಯಂಕರ್:ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ವಿತರಿಸಲಾದ ಗಣತಿ ನಮೂನೆಗಳನ್ನು ಮತದಾರರು ನಿಗದಿತ ಅವಧಿಯೊಳಗೆ ಭರ್ತಿ ಮಾಡಿ ಸಂಬಂಧಿತ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲ
DC dwd


ಧಾರವಾಡ, 13 ಜುಲೈ (ಹಿ.ಸ.):

ಆ್ಯಂಕರ್:ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ವಿತರಿಸಲಾದ ಗಣತಿ ನಮೂನೆಗಳನ್ನು ಮತದಾರರು ನಿಗದಿತ ಅವಧಿಯೊಳಗೆ ಭರ್ತಿ ಮಾಡಿ ಸಂಬಂಧಿತ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ 1,665 ಮತಗಟ್ಟೆಗಳಿಗೆ 1,665 ಬಿಎಲ್‌ಒಗಳು ಹಾಗೂ 230 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 16.21 ಲಕ್ಷ ಮತದಾರರಿದ್ದು, ಇದುವರೆಗೆ 15.19 ಲಕ್ಷ ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಶೇ.93.69ರಷ್ಟು ವಿತರಣೆ ಪೂರ್ಣಗೊಂಡಿದೆ ಎಂದು ತಿಳಿಸಿದರು.

ಭರ್ತಿ ಮಾಡಿದ ನಮೂನೆಗಳನ್ನು ಬಿಎಲ್‌ಒಗಳಿಗೆ ಹಿಂದಿರುಗಿಸದಿದ್ದರೆ ಅಂತಹ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದಿಲ್ಲ ಎಂದು ಅವರು ಎಚ್ಚರಿಸಿದರು.

ಜಿಲ್ಲೆಯಲ್ಲಿ ಗೈರುಹಾಜರಿ, ಶಾಶ್ವತ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಸೇರಿ ಒಟ್ಟು 57,319 ಪ್ರಕರಣಗಳನ್ನು ಗುರುತಿಸಲಾಗಿದೆ. ಮತದಾರರ ಅನುಕೂಲಕ್ಕಾಗಿ ಜಿಲ್ಲೆಯಾದ್ಯಂತ 509 ಬಿಎಲ್‌ಒ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಅಗತ್ಯ ದಾಖಲೆಗಳ ಅಪ್‌ಲೋಡ್‌ಗೆ ತಾಂತ್ರಿಕ ನೆರವು ಒದಗಿಸಲಾಗುತ್ತಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರು, ಬಿಎಲ್‌ಒಗಳು ಹಾಗೂ ರಾಜಕೀಯ ಪಕ್ಷಗಳು ಸಹಕರಿಸಬೇಕು. ಬಿಎಲ್‌ಒಗಳು ಮನೆ ಮನೆಗೆ ತೆರಳಿ ಅರ್ಹ ಮತದಾರರಿಂದ ನಮೂನೆಗಳನ್ನು ಭರ್ತಿ ಮಾಡಿಸಿ, ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕರೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande