

ರಾಯಚೂರು, 13 ಜುಲೈ (ಹಿ.ಸ.)
ಆ್ಯಂಕರ್ : ಜನಶಕ್ತಿ ವಿಶ್ವಸ್ಥ ಮಂಡಳಿ `ಲೋಕಧ್ವನಿ’ಯ ‘ನಮ್ಮ ಹೆಮ್ಮೆಯ ಸಾಧಕರು ಪ್ರಶಸ್ತಿ’ಗೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಶಿವಾನಂದ ಕೆಳಗಿನಮನಿ ಅವರಿಗೆ ಶಿಲ್ಲಾಂಗ್ನ ಲೋಕಭವನದಲ್ಲಿ ಮೇಘಾಲಯ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ್ ಅವರು ಕುಲಪತಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಎ. ಚನ್ನಪ್ಪ, ಕುಲಸಚಿವರು(ಮೌಲ್ಯಮಾಪನ) ಜ್ಯೋತಿ ಧಮ್ಮ ಪ್ರಕಾಶ್, ಹಣಕಾಸು ಅಧಿಕಾರಿ, ಉಪಕುಲಸಚಿವರು, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರು, ವಿವಿಧ ವಿಭಾಗಗಳ ನಿಕಾಯ ಡೀನರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್