ಬೆಂಗಳೂರಿನಲ್ಲಿ ಶ್ವಾನಗಳ ಲಸಿಕಾಕರಣಕ್ಕೆ ಪೂರ್ವಸಿದ್ಧತೆ
ಬೆಂಗಳೂರು, 13 ಜುಲೈ (ಹಿ.ಸ.): ಆ್ಯಂಕರ್: ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯ ವಲಯ–2ರ ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸವೇಶ್ವರನಗರ ವಾರ್ಡ್‌ನಲ್ಲಿ ಶ್ವಾನಗಳ ಲಸಿಕಾಕರಣ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆಯ ಅಂಗವಾಗಿ ಪಾಲಿಕೆಯ ಪಶುಪಾಲನಾ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳ ಪರಿ
ಪೂರ್ವ ಸಿದ್ದತೆ


ಬೆಂಗಳೂರು, 13 ಜುಲೈ (ಹಿ.ಸ.):

ಆ್ಯಂಕರ್:

ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಯ ವಲಯ–2ರ ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸವೇಶ್ವರನಗರ ವಾರ್ಡ್‌ನಲ್ಲಿ ಶ್ವಾನಗಳ ಲಸಿಕಾಕರಣ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆಯ ಅಂಗವಾಗಿ ಪಾಲಿಕೆಯ ಪಶುಪಾಲನಾ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಲಸಿಕಾಕರಣ ಕಾರ್ಯವನ್ನು ಸುಗಮ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮಗಳು, ಸ್ಥಳೀಯ ವ್ಯವಸ್ಥೆಗಳು ಹಾಗೂ ಕಾರ್ಯಯೋಜನೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande