
ಬೆಂಗಳೂರು, 13 ಜುಲೈ (ಹಿ.ಸ.):
ಆ್ಯಂಕರ್:ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ವಿಶಾಖಪಟ್ಟಣಂ–ಎಸ್ಎಂವಿಟಿ ಬೆಂಗಳೂರು–ವಿಶಾಖಪಟ್ಟಣಂ ನಡುವಿನ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 08581 ವಿಶಾಖಪಟ್ಟಣಂ–ಎಸ್ಎಂವಿಟಿ ಬೆಂಗಳೂರು ವಿಶೇಷ ರೈಲು ಪ್ರತಿ ಶುಕ್ರವಾರ ಸಂಚರಿಸಲಿದ್ದು, ಆಗಸ್ಟ್ 7ರಿಂದ ಸೆಪ್ಟೆಂಬರ್ 25ರವರೆಗೆ ಸೇವೆ ಮುಂದುವರಿಯಲಿದೆ.
ಅದೇ ರೀತಿ, ರೈಲು ಸಂಖ್ಯೆ 08582 ಎಸ್‌ಎಂವಿಟಿ ಬೆಂಗಳೂರು–ವಿಶಾಖಪಟ್ಟಣಂ ವಿಶೇಷ ರೈಲು ಪ್ರತಿ ಶನಿವಾರ ಸಂಚರಿಸಲಿದ್ದು, ಆಗಸ್ಟ್ 8ರಿಂದ ಸೆಪ್ಟೆಂಬರ್ 26ರವರೆಗೆ ವಿಸ್ತರಿಸಲಾಗಿದೆ.
ವಿಸ್ತರಿತ ಅವಧಿಯಲ್ಲಿ ಎರಡೂ ದಿಕ್ಕುಗಳಲ್ಲಿ ತಲಾ 8 ಹೆಚ್ಚುವರಿ ಸಂಚಾರಗಳು ನಡೆಯಲಿದ್ದು, ಈಗಿನ ವೇಳಾಪಟ್ಟಿ, ನಿಲ್ದಾಣಗಳು ಹಾಗೂ ಬೋಗಿಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನೈಋತ್ಯ ರೇಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.