ಬಿಡದಿ ಟೌನ್ಶಿಪ್ ವಿಚಾರ: ರೈತರ ಮೇಲಿನ ಪ್ರಕರಣ ಹಿಂಪಡೆಯಲು ಆರ್. ಅಶೋಕ್ ಆಗ್ರಹ
ಬೆಂಗಳೂರು, 14 ಜುಲೈ (ಹಿ.ಸ.): ಆ್ಯಂಕರ್: ಬಿಡದಿ ಟೌನ್‌ಶಿಪ್ ಯೋಜನೆ ಸಂಬಂಧ ರೈತರ ಜಮೀನಿನಲ್ಲಿ ಜಂಟಿ ಮಾಪನ (ಜೆಎಂಸಿ) ನಡೆಸುವ ವೇಳೆ ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾ
ಅಶೋಕ


ಬೆಂಗಳೂರು, 14 ಜುಲೈ (ಹಿ.ಸ.):

ಆ್ಯಂಕರ್:

ಬಿಡದಿ ಟೌನ್‌ಶಿಪ್ ಯೋಜನೆ ಸಂಬಂಧ ರೈತರ ಜಮೀನಿನಲ್ಲಿ ಜಂಟಿ ಮಾಪನ (ಜೆಎಂಸಿ) ನಡೆಸುವ ವೇಳೆ ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಜಮೀನಿನ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ರೈತರಿಗೆ ಯಾವುದೇ ಪೂರ್ವ ಮಾಹಿತಿ ನೀಡದೆ ಜಮೀನಿಗೆ ಪ್ರವೇಶಿಸಿ ಜಂಟಿ ಮಾಪನ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನು ಪ್ರಶ್ನಿಸಿದ ರೈತರ ಮೇಲೆಯೇ ಸುಳ್ಳು ಎಫ್‌ಐಆರ್ ದಾಖಲಿಸಿ ಬೆದರಿಕೆ ಹಾಕಲಾಗಿದೆ. ರೈತರ ಪರವಾಗಿ ನಿಲ್ಲಬೇಕಾದ ಸರ್ಕಾರವೇ ಪೊಲೀಸರನ್ನು ಬಳಸಿಕೊಂಡು ಹೋರಾಟವನ್ನು ಹತ್ತಿಕ್ಕಲು ಮುಂದಾಗಿರುವುದು ಖಂಡನೀಯ ಎಂದು ಅಶೋಕ್ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ವಿರುದ್ಧ ಸೇಡಿನ ರಾಜಕಾರಣವನ್ನು ನಿಲ್ಲಿಸಿ, 48 ಗಂಟೆಗಳೊಳಗೆ ರೈತರ ವಿರುದ್ಧ ದಾಖಲಿಸಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆದು, ವಶಕ್ಕೆ ಪಡೆದಿರುವ ರೈತರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇಲ್ಲದಿದ್ದರೆ ಬಿಜೆಪಿ ರೈತರೊಂದಿಗೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ. ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಗೆ ರಾಜ್ಯದ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಅಶೋಕ್ ಎಚ್ಚರಿಕೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande