
ಬಳ್ಳಾರಿ, 14 ಜುಲೈ (ಹಿ.ಸ.):
ಆ್ಯಂಕರ್ : ಜೆಸ್ಕಾಂ ಬಳ್ಳಾರಿ ನಗರ ಉಪವಿಭಾಗ-2 ರ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣದ ವಿದ್ಯುತ್ ಲೈನಿನ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಜುಲೈ 15 ರಂದು ಬೆಳಿಗ್ಗೆ 09 ರಿಂದ 05 ಗಂಟೆಯವರೆಗೆ ಈ ವ್ಯಾಪ್ತಿಯ ಎಫ್-6 ಮತ್ತು ಎಫ್-14 ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಫೀಡರ್-6 ರ ವ್ಯಾಪ್ತಿಯ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ.
ಫೀಡರ್-14 ರ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್