
ಬೆಂಗಳೂರು, 14 ಜುಲೈ (ಹಿ.ಸ.):
ಆ್ಯಂಕರ್:
ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಮಂಡಲಹಳ್ಳಿಯಲ್ಲಿ ನಡೆದ ಭೂಸ್ವಾಧೀನ ಸರ್ವೆ ವೇಳೆ ರೈತ ಮಹಿಳೆಯರು ಮತ್ತು ಅಧಿಕಾರಿಗಳ ನಡುವೆ ನಡೆದ ಸಂಘರ್ಷಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಿಯಲ್ ಎಸ್ಟೇಟ್ ಹಿತಾಸಕ್ತಿಗಾಗಿ ಅಮಾಯಕ ರೈತರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಟೀಕಿಸಿದರು.
ಬರಗಾಲದಿಂದ ಸಂಕಷ್ಟದಲ್ಲಿರುವ ರೈತರನ್ನು ಭೂಸ್ವಾಧೀನದ ಮೂಲಕ ಮತ್ತಷ್ಟು ಸಂಕಷ್ಟಕ್ಕೆ ತಳ್ಳುವ ಬದಲು, ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಬೇಕು ಎಂದು ಆಗ್ರಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.