
ಬೆಂಗಳೂರು, 14 ಜುಲೈ (ಹಿ.ಸ.):
ಆ್ಯಂಕರ್:ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರಗೌಡರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತಾಸಕ್ತಿಗಾಗಿ ರಾಮಚಂದ್ರಗೌಡರು ನೀಡಿದ ಕೊಡುಗೆ ಅಪಾರವಾಗಿದೆ. ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಸರಳ, ಸಜ್ಜನ ರಾಜಕಾರಣಿಯಾಗಿದ್ದ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮಚಂದ್ರಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಜನಹಿತಕ್ಕಾಗಿ ದುಡಿದ ಅಪರೂಪದ ನಾಯಕನ ಅಗಲಿಕೆ ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.