ಶಿಶು ಅಭಿವೃದ್ಧಿ ಯೋಜನೆ ,ತಾತ್ಕಾಲಿಕ ಆಯ್ಕೆ ಪ್ರಕಟ: ಅಕ್ಷೇಪಣೆಗೆ ಅರ್ಜಿ ಆಹ್ವಾನ
ರಾಯಚೂರು , 14 ಜುಲೈ (ಹಿ.ಸ.): ಆ್ಯಂಕರ್ : ರಾಯಚೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಬರುವ ಸುಖಶಾಂತಿನಗರ ಅಂಗನವಾಡಿ ಕೇಂದ್ರದ ಅಂಗನವಾಡಿ ಸಹಾಯಕಿಯ ತಾತ್ಕಾಲಿಕವಾಗಿ ಆಯ್ಕೆ ಪ್ರಕಟಿಸಲಾಗಿದ್ದು, ಅಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಯಚೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿ
ಶಿಶು ಅಭಿವೃದ್ಧಿ ಯೋಜನೆ ,ತಾತ್ಕಾಲಿಕ ಆಯ್ಕೆ ಪ್ರಕಟ: ಅಕ್ಷೇಪಣೆಗೆ ಅರ್ಜಿ ಆಹ್ವಾನ


ರಾಯಚೂರು , 14 ಜುಲೈ (ಹಿ.ಸ.):

ಆ್ಯಂಕರ್ : ರಾಯಚೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಬರುವ ಸುಖಶಾಂತಿನಗರ ಅಂಗನವಾಡಿ ಕೇಂದ್ರದ ಅಂಗನವಾಡಿ ಸಹಾಯಕಿಯ ತಾತ್ಕಾಲಿಕವಾಗಿ ಆಯ್ಕೆ ಪ್ರಕಟಿಸಲಾಗಿದ್ದು, ಅಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಯಚೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಸುಖಶಾಂತಿನಗರ ಅಂಗನವಾಡಿ ಕೇಂದ್ರದ ಅಂಗನವಾಡಿ ಸಹಾಯಕಿಯ ಹುದ್ದೆಯು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಅಂಗನವಾಡಿ ಸಹಾಯಕಿಯಾಗಿ ಶ್ರೀಮತಿ ಸರಿತ ಗಂಡ ಮಲ್ಲಯ್ಯ ಅವರು ತಾತ್ಕಾಲಿಕ ಆಯ್ಕೆಗೆ ಆಯ್ಕೆಯಾಗಿದ್ದಾರೆ.

ಆಯ್ಕೆಗೆ ಆಕ್ಷೇಪಣೆ ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಜುಲೈ 20ರ ಸಂಜೆ 05.30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ .

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande