ಉದ್ಯಮಶೀಲತಾ ಪ್ರೇರಣ : ನೋಂದಣಿ
ಕೊಪ್ಪಳ, 14 ಜುಲೈ (ಹಿ.ಸ.) ಆ್ಯಂಕರ್ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರು ಸ್ವಯಂ ಉದ್ಯೋಗವನ್ನು ಕೈಗೊಳ್ಳಲು ಒಂದು ದಿನದ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮವನ್ನು ಕೊಪ್ಪಳ
ಉದ್ಯಮಶೀಲತಾ ಪ್ರೇರಣ : ನೋಂದಣಿ


ಕೊಪ್ಪಳ, 14 ಜುಲೈ (ಹಿ.ಸ.)

ಆ್ಯಂಕರ್ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಇವರು ಸ್ವಯಂ ಉದ್ಯೋಗವನ್ನು ಕೈಗೊಳ್ಳಲು ಒಂದು ದಿನದ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮವನ್ನು ಕೊಪ್ಪಳದಲ್ಲಿ ಏರ್ಪಡಿಸಲಾಗಿದ್ದು, ಆಸಕ್ತರು ಹೆಸರು ನೋಂದಾಯಿಸಲು ಸೂಚಿಸಿದೆ.

ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಪ್ರೇರೇಪಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು. ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಲಾಗಿದೆ.

ಆಸಕ್ತ ಅಭ್ಯರ್ಥಿಗಳು ಜುಲೈ 20 ರೊಳಗಾಗಿ ಹೆಸರು ನೋಂದಾಯಿಸಬಹುದು. ಭಾಗವಹಿಸುವವರು ಕನಿಷ್ಟ 18 ರಿಂದ 40 ವಯಸ್ಸಿನವರಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಛೇರಿ ಆವರಣ, ನಗರಸಭೆ ಎದುರುಗಡೆ, ಕೊಪ್ಪಳ ಇಲ್ಲಿಗೆ ಅಥವಾ ಮೊ:7204016012 ಇವರನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande