
ಬಳ್ಳಾರಿ, 14 ಜುಲೈ (ಹಿ.ಸ.):
ಆ್ಯಂಕರ್ : ಕರ್ನಾಟಕ ಸರ್ಕಾರವು ಕರ್ನಾಟಕ ಲೋಕ ಸೇವ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನಡೆಸಲಿರುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿಗಾಗಿ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಕರಾಮುವಿ ಕುಲಸಚಿವ ಪ್ರೋ. ನವೀನ್ಕುಮಾರ್ ಎಸ್.ಕೆ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 50 ದಿನಗಳ ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಈ ತರಬೇತಿ ಕಾರ್ಯಕ್ರಮವು ಮೈಸೂರಿನಲ್ಲಿರುವ ಮುಕ್ತ ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.
ನೋಂದಣಿಗೆ ಜುಲೈ 21 ಕೊನೆಯ ದಿನವಾಗಿದೆ. ಹೆಚ್ಚಿನ ವಿವರ ಹಾಗೂ ನೋಂದಣಿಗಾಗಿ ದೂ. 0821-2515944 ಅನ್ನು ಸಂಪರ್ಕಿಸಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್