
ಬೆಂಗಳೂರು, 14 ಜುಲೈ (ಹಿ.ಸ.):
ಆ್ಯಂಕರ್:
ಬಿಡದಿ ಟೌನ್‌ಶಿಪ್ ಯೋಜನೆ ಸಂಬಂಧ ಭೂಸ್ವಾಧೀನ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು, ಮಂಡಲಹಳ್ಳಿಯಲ್ಲಿ ನಡೆದ ಪ್ರತಿಭಟನೆ ಬಳಿಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ಅನ್ನದಾತರ ಆಕ್ರೋಶಕ್ಕೆ ಗುರಿಯಾದ ಯಾವ ಸರ್ಕಾರವೂ ಉಳಿದ ಇತಿಹಾಸವಿಲ್ಲ. ರೈತರ ಜಮೀನನ್ನು ಬಲವಂತವಾಗಿ ಕಸಿದುಕೊಳ್ಳಲು ಹೊರಟಿರುವ ಈ ಸರ್ಕಾರಕ್ಕೆ ಮಂಡಲಹಳ್ಳಿಯಲ್ಲಿ ರೈತರು ತಕ್ಕ ಪಾಠ ಕಲಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
“ಅಭಿವೃದ್ಧಿಯ ಹೆಸರಿನಲ್ಲಿ ರೈತರ ಹೊಟ್ಟೆಗೆ ಹೊಡೆಯಲು ಹೊರಟಿರುವ ರೈತ ವಿರೋಧಿ ಸರ್ಕಾರಕ್ಕೆ ಕಣ್ಣು ಕಾಣುತ್ತಿಲ್ಲವೇ, ಕಿವಿ ಕೇಳುತ್ತಿಲ್ಲವೇ? ತಾಯಂದಿರೇ ಕಸಪೊರಕೆ ಹಿಡಿದು ಅಧಿಕಾರಿಗಳನ್ನು ಓಡಿಸುತ್ತಿದ್ದಾರೆ ಎಂದರೆ ಜನರ ಆಕ್ರೋಶ ಎಷ್ಟಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಡ” ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉದ್ದೇಶಿಸಿ, “ಅನ್ನದಾತರ ಕಣ್ಣೀರು ಮತ್ತು ಆಕ್ರೋಶಕ್ಕೆ ಗುರಿಯಾದ ಯಾವುದೇ ಸರ್ಕಾರ ಉಳಿದಿಲ್ಲ. ಬಿಡದಿ ಟೌನ್‌ಶಿಪ್ ಹೆಸರಿನ ಬಲವಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣ ಕೈಬಿಡಬೇಕು” ಎಂದು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.