
ಬೆಂಗಳೂರು, 14 ಜುಲೈ (ಹಿ.ಸ.):
ಆ್ಯಂಕರ್:
ಮಂಡ್ಯ ಜಿಲ್ಲೆಯ ರೈತರಿಗೆ ತಕ್ಷಣವೇ ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಬೇಕೆಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಎಕ್ಸ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ಒಂದು ತಿಂಗಳಿನಿಂದ ಬೆಳೆಗಳಿಗೆ ನೀರು ಬಿಡುವಂತೆ ಮಂಡ್ಯ ರೈತರು ಮನವಿ ಮಾಡುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವಲ್ಲಿ ತೋರಿಸುವ ಉತ್ಸಾಹ, ಬೆಳೆ ಉಳಿಸುವಲ್ಲಿ ಕಾಣುತ್ತಿಲ್ಲ. ಮಂಡ್ಯ ರೈತರ ಬೇಡಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.
ರೈತರ ಆಕ್ರೋಶ ಕಟ್ಟೆಯೊಡೆಯುವ ಮುನ್ನವೇ ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿ, ರೈತರ ಬೆಳೆಗಳನ್ನು ರಕ್ಷಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.