ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ಉದ್ಧವ್, ಕೇಜ್ರಿವಾಲ್ ಮನವಿ
ನವದೆಹಲಿ, 14 ಜುಲೈ (ಹಿ.ಸ.): ಆ್ಯಂಕರ್: ಜಂತರ್-ಮಂತರ್‌ನಲ್ಲಿ ಕಳೆದ 17 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮುಖ್ಯಸ್ಥ ಉದ್ಧವ್ ಠಾಕ್ರೆ, ಆಮ್ ಆದ್ಮಿ ಪಕ್ಷದ ಸಂಯೋಜ
ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್


ನವದೆಹಲಿ, 14 ಜುಲೈ (ಹಿ.ಸ.):

ಆ್ಯಂಕರ್:

ಜಂತರ್-ಮಂತರ್‌ನಲ್ಲಿ ಕಳೆದ 17 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮುಖ್ಯಸ್ಥ ಉದ್ಧವ್ ಠಾಕ್ರೆ, ಆಮ್ ಆದ್ಮಿ ಪಕ್ಷದ ಸಂಯೋಜಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಪ್ರತಿ ಪಕ್ಷದ ನಾಯಕರು ಉಪವಾಸ ಅಂತ್ಯಗೊಳಿಸುವಂತೆ ಮನವಿ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು, ವಾಂಗ್ಚುಕ್ ಅವರ ಬೇಡಿಕೆಗಳಿಗೆ ತಮ್ಮ ಬೆಂಬಲವಿದೆ ಎಂದು ಹೇಳಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ, ಗುರುವಾರ ಜಂತರ್-ಮಂತರ್‌ಗೆ ಭೇಟಿ ನೀಡಿ ವಾಂಗ್ಚುಕ್ ಅವರನ್ನು ಭೇಟಿಯಾಗಿ ಉಪವಾಸ ಅಂತ್ಯಗೊಳಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಆದರೆ, ವಾಂಗ್ಚುಕ್ ಅವರು ತಮ್ಮ ನಿಲುವಿನಲ್ಲಿ ಅಚಲವಾಗಿದ್ದು, ನನ್ನನ್ನು ಉಪವಾಸ ಮುಗಿಸಲು ಕೇಳಬೇಡಿ. ಸರ್ಕಾರ ಏಕೆ ಮಾತುಕತೆಗೆ ಮುಂದೆ ಬರುತ್ತಿಲ್ಲ ಎಂದು ಪ್ರಶ್ನಿಸಿ ಎಂದು ಪ್ರತಿಕ್ರಿಯಿಸಿದ್ದಾರೆ.

ಉದ್ಧವ್ ಠಾಕ್ರೆ, ಅರವಿಂದ್ ಕೇಜ್ರಿವಾಲ್, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಜಂತರ್-ಮಂತರ್‌ನಿಂದ ಸಂಸತ್‌ವರೆಗೆ ನಡೆಯಲಿರುವ ಶಾಂತಿಯುತ ಪ್ರತಿಭಟನಾ ಮೆರವಣಿಗೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರು ದೇಶದ ಜನರು ಡಿಜಿಟಲ್ ಬೆಂಬಲಕ್ಕೆ ಸೀಮಿತವಾಗದೆ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ. ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳು ಈಡೇರುವವರೆಗೆ ಹಾಗೂ ಸಂಬಂಧಿತ ಜವಾಬ್ದಾರಿಯುತ ಅಧಿಕಾರಿಗಳು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಸೋನಂ ವಾಂಗ್ಚುಕ್ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸ್ಪಷ್ಟಪಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande