
ಕೊಪ್ಪಳ, 14 ಜುಲೈ (ಹಿ.ಸ.)
ಆ್ಯಂಕರ್ : ಕರ್ನಾಟಕ ಸರ್ಕಾರವು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ (ಕೆಇಎ) ನಡೆಸಲಿರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಆಸಕ್ತರು ಹೆಸರು ನೋಂದಾಯಿಸಲು ಸೂಚಿಸಿದೆ.
ಆಸಕ್ತರು ಜುಲೈ 21 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.ಸಂ: 0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್