ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕುಷ್ಟಗಿ ನಾಗರಿಕರ ಆಗ್ರಹ
ಕುಷ್ಟಗಿ, 14 ಜುಲೈ (ಹಿ.ಸ.): ಆ್ಯಂಕರ್:ಕುಷ್ಟಗಿ ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ನಾಗರಿಕರು ಆರೋಪಿಸಿದ್ದಾರೆ. ನಿಯಮಿತವಾಗಿ ಕುಡಿಯುವ ನೀರು ಸರಬರಾಜಾಗದ ಹಿನ್ನೆಲೆಯಲ್ಲಿ ಮಹಿಳೆಯರು, ಹ
ಮನವಿ


ಕುಷ್ಟಗಿ, 14 ಜುಲೈ (ಹಿ.ಸ.):

ಆ್ಯಂಕರ್:ಕುಷ್ಟಗಿ ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ನಾಗರಿಕರು ಆರೋಪಿಸಿದ್ದಾರೆ.

ನಿಯಮಿತವಾಗಿ ಕುಡಿಯುವ ನೀರು ಸರಬರಾಜಾಗದ ಹಿನ್ನೆಲೆಯಲ್ಲಿ ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಸೇರಿದಂತೆ ಸಾರ್ವಜನಿಕರು ನೀರಿಗಾಗಿ ಪರದಾಡುವಂತಾಗಿದೆ. ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಗಮನಿಸಿ, ಪಟ್ಟಣಕ್ಕೆ ನಿಯಮಿತ ಮತ್ತು ಸಮರ್ಪಕವಾಗಿ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಶಾಸಕ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನಾಗರಿಕರು ಮನವಿ ಮಾಡಿದ್ದಾರೆ.

ಜನರ ಸಂಕಷ್ಟಕ್ಕೆ ಶೀಘ್ರ ಸ್ಪಂದಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಕುಷ್ಟಗಿಯ ನೊಂದ ನಾಗರಿಕರು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande