ಸಮಾಜಸೇವಕ ನಂದಕಿಶೋರ್ ಗೋಯೆಂಕಾ ನಿಧನಕ್ಕೆ ಸಂಘದ ಸಂತಾಪ
ನವದೆಹಲಿ, 14 ಜುಲೈ (ಹಿ.ಸ.): ಆ್ಯಂಕರ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಹಾಗೂ ಸಮಾಜಸೇವಕ ನಂದಕಿಶೋರ್ ಗೋಯೆಂಕಾ ಅವರು ಸೋಮವಾರ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹಾಗೂ ಸರ್ಕಾರ್ಯವಾಹ ದತ್ತಾತ್ರೇಯ ಹೊ
ನಂದಕಿಶೋರ್ ಗೋಯೆಂಕಾ ಸಂಗ್ರಹ ಚಿತ್ರ


ನವದೆಹಲಿ, 14 ಜುಲೈ (ಹಿ.ಸ.):

ಆ್ಯಂಕರ್:

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಹಾಗೂ ಸಮಾಜಸೇವಕ ನಂದಕಿಶೋರ್ ಗೋಯೆಂಕಾ ಅವರು ಸೋಮವಾರ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು.

ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹಾಗೂ ಸರ್ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಸಂತಾಪ ಸೂಚಿಸಿ, ಗೋಯೆಂಕಾ ಅವರು ಜೀವನಪರ್ಯಂತ ಗೋಸೇವೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎಂದು ಸ್ಮರಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಗೋಯೆಂಕಾ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

1930ರ ಸೆಪ್ಟೆಂಬರ್ 28ರಂದು ಹರಿಯಾಣದ ಹಿಸಾರ್‌ನಲ್ಲಿ ಜನಿಸಿದ ನಂದಕಿಶೋರ್ ಗೋಯೆಂಕಾ ಅವರು ತಮ್ಮ ಜೀವನವನ್ನು ಸಮಾಜಸೇವೆ, ರಾಷ್ಟ್ರನಿರ್ಮಾಣ ಮತ್ತು ಧಾರ್ಮಿಕ ಕಾರ್ಯಗಳಿಗೆ ಸಮರ್ಪಿಸಿದ್ದರು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮರ್ಪಿತ ಸ್ವಯಂಸೇವಕರಾಗಿದ್ದು, ಸಂಘದಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಲ್ಲದೆ, ಅಗ್ರೋಹ ಧಾಮದ ಅಭಿವೃದ್ಧಿ ಮತ್ತು ವಿಸ್ತರಣೆಯಲ್ಲಿ ಮಹತ್ವದ ಪಾತ್ರವಹಿಸಿ, ಅದರ ಪ್ರಮುಖ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande