ಗದಗ ಜಿಲ್ಲೆಯಲ್ಲಿ ಎಸ್.ಐ.ಆರ್. ಪ್ರಕ್ರಿಯೆ ಚುರುಕು
ಗದಗ, 14 ಜುಲೈ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ವೇಗವಾಗಿ ಸಾಗುತ್ತಿದ್ದು, ಈವರಿಗೆ ಒಟ್ಟು 9,02,411 ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸಲಾಗಿದೆ. ಅಲ್ಲದೆ, 3,25,001 ಎನ್ಯುಮರೇಷನ್ ಫಾರ್ಮಗಳನ್ನು ಡಿಜಿಟಲೀಕರಣ ಮಾಡ
ಫೋಟೋ


ಗದಗ, 14 ಜುಲೈ (ಹಿ.ಸ.)

ಆ್ಯಂಕರ್:- ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ವೇಗವಾಗಿ ಸಾಗುತ್ತಿದ್ದು, ಈವರಿಗೆ ಒಟ್ಟು 9,02,411 ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸಲಾಗಿದೆ. ಅಲ್ಲದೆ, 3,25,001 ಎನ್ಯುಮರೇಷನ್ ಫಾರ್ಮಗಳನ್ನು ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ನೋಂದಾಯಿತರಾಗಿದ್ದು, ಅವರಿಗಾಗಿ 967 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಓಗಳು) ಮನೆ ಮನೆಗೆ ತೆರಳಿ ಮತದಾರರಿಗೆ ಎನ್ಯುಮರೇಷನ್ ಫಾರ್ಮಗಳನ್ನು ವಿತರಿಸುತ್ತಿದ್ದಾರೆ.

ಮತದಾರರ ವಿವರಗಳನ್ನು ನವೀಕರಿಸುವ ಹಾಗೂ ಮತದಾರರ ಪಟ್ಟಿಯನ್ನು ಹೆಚ್ಚು ನಿಖರಗೊಳಿಸುವ ಉದ್ದೇಶದಿಂದ ಈ ಅಭಿಯಾನ ಕೈಗೊಳ್ಳಲಾಗಿದೆ. ಬಿ.ಎಲ್.ಓಗಳು ಜುಲೈ 29ರವರೆಗೆ ಮನೆ ಮನೆಗೆ ಭೇಟಿ ನೀಡಿ ಫಾರ್ಮಗಳನ್ನು ವಿತರಿಸುವ ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಸಂಗ್ರಹಿಸುವ ಕಾರ್ಯ ಮುಂದುವರಿಸಲಿದ್ದಾರೆ.

ಜಿಲ್ಲಾಡಳಿತದ ಮಾಹಿತಿಯ ಪ್ರಕಾರ, ಈಗಾಗಲೇ ಬಹುತೇಕ ಮತದಾರರಿಗೆ ಫಾರ್ಮಗಳನ್ನು ವಿತರಿಸಲಾಗಿದ್ದು, ಡಿಜಿಟಲೀಕರಣ ಕಾರ್ಯವೂ ಸಮಾನಾಂತರವಾಗಿ ನಡೆಯುತ್ತಿದೆ. ಇದರಿಂದ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಮತ್ತಷ್ಟು ವೇಗ ಪಡೆದುಕೊಂಡಿದೆ.

ಜಿಲ್ಲಾಡಳಿತವು ಎಲ್ಲ ಮತದಾರರು ಬಿ.ಎಲ್.ಓಗಳೊಂದಿಗೆ ಸಹಕರಿಸಿ, ಅಗತ್ಯ ದಾಖಲೆಗಳೊಂದಿಗೆ ಎನ್ಯುಮರೇಷನ್ ಫಾರ್ಮಗಳನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸುವಂತೆ ಮನವಿ ಮಾಡಿದೆ. ಮತದಾರರ ಹೆಸರು, ವಿಳಾಸ, ವಯಸ್ಸು ಹಾಗೂ ಇತರ ಮಾಹಿತಿಯಲ್ಲಿ ಯಾವುದೇ ಬದಲಾವಣೆಗಳಿದ್ದರೆ ಅವುಗಳನ್ನು ಈ ಪ್ರಕ್ರಿಯೆಯಲ್ಲಿ ದಾಖಲಿಸುವ ಅವಕಾಶವಿದೆ ಎಂದು ತಿಳಿಸಿದೆ.

ಎಸ್ಐಆರ್ ಅಭಿಯಾನದ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲಾಡಳಿತ, ಚುನಾವಣಾ ಅಧಿಕಾರಿಗಳು ಹಾಗೂ ಬಿ.ಎಲ್.ಓಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ನಿಖರ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಗುರಿಯೊಂದಿಗೆ ಕಾರ್ಯ ಸಾಗುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande