ಗದಗ ಜಿಲ್ಲೆಯಲ್ಲೇ ಮಾದರಿಯಾಗಿ ಸಂಜೀವಿನಿ ಯೋಜನೆ
ಗದಗ, 14 ಜುಲೈ (ಹಿ.ಸ.) ಆ್ಯಂಕರ್:- ಸಂಜೀವಿನಿ ಯೋಜನೆಯ ಎಲ್ಲಾ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿಯೇ ಮೊದಲಾಗಿ ಹಾಗೂ ಮಾದರಿಯಾಗಿ ನರಗುಂದ ತಾಲೂಕಿನಲ್ಲಿ ಅನುಷ್ಠಾನಗೊಳಿಸುವಂತೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಸೂಚಿಸಿದರು. ತಾಲೂಕು ಪಂಚಾಯತ ಸಭಾಭವನದಲ್ಲಿ ನಡೆದ ಸಂಜೀವಿನ
ಫೋಟೋ


ಗದಗ, 14 ಜುಲೈ (ಹಿ.ಸ.)

ಆ್ಯಂಕರ್:- ಸಂಜೀವಿನಿ ಯೋಜನೆಯ ಎಲ್ಲಾ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿಯೇ ಮೊದಲಾಗಿ ಹಾಗೂ ಮಾದರಿಯಾಗಿ ನರಗುಂದ ತಾಲೂಕಿನಲ್ಲಿ ಅನುಷ್ಠಾನಗೊಳಿಸುವಂತೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಸೂಚಿಸಿದರು.

ತಾಲೂಕು ಪಂಚಾಯತ ಸಭಾಭವನದಲ್ಲಿ ನಡೆದ ಸಂಜೀವಿನಿ ಯೋಜನೆಯ ಮುಖ್ಯ ಪುಸ್ತಕ ಬರಹಗಾರರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಜನರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶ ಹೊಂದಿರುವ ಸಂಜೀವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಿಬ್ಬಂದಿ ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ತಾಲೂಕಿನಲ್ಲಿ ಅಕ್ಕಾ ಕಫೆ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಉಪಹಾರ, ಊಟ ಸೇರಿದಂತೆ ನೈಸರ್ಗಿಕ ಆಹಾರ ಪದಾರ್ಥಗಳನ್ನು ಅಕ್ಕಾ ಕಫೆ ಮೂಲಕ ಸಾರ್ವಜನಿಕರಿಗೆ ತಲುಪಿಸಬೇಕು. ಸರ್ಕಾರಿ ವಿದ್ಯಾರ್ಥಿನಿಲಯಗಳು ಹಾಗೂ ವಿವಿಧ ಸರ್ಕಾರಿ ಕಾರ್ಯಕ್ರಮಗಳಿಗೆ ಅಕ್ಕಾ ಕಫೆಯ ಮೂಲಕ ಆಹಾರ ಪೂರೈಕೆ ಮಾಡಿದರೆ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ ಎಂದು ತಿಳಿಸಿದರು.

ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾರದ ಸಂತೆಗಳನ್ನು ಪುನರಾರಂಭಿಸಲು ಕ್ರಮವಹಿಸಬೇಕು. ರೈತರು ಬೆಳೆದ ತರಕಾರಿಗಳನ್ನು ಸ್ವಸಹಾಯ ಸಂಘಗಳ ಮಹಿಳೆಯರು ಖರೀದಿಸಿ ಮಾರಾಟ ಮಾಡುವ ವ್ಯವಸ್ಥೆ ರೂಪಿಸಿದರೆ ರೈತರು, ಮಹಿಳೆಯರು ಹಾಗೂ ಗ್ರಾಹಕರಿಗೆ ಅನುಕೂಲವಾಗಲಿದೆ. ಗ್ರಾಮ ಪಂಚಾಯತಿಗಳ ಸಹಕಾರದೊಂದಿಗೆ ವಾರದ ಸಂತೆಗಳಿಗೆ ಮರುಜೀವ ನೀಡಬೇಕು ಎಂದು ಹೇಳಿದರು.

ಯೋಜನೆಯಡಿ ಬಿಡುಗಡೆಯಾಗುವ ಅನುದಾನವನ್ನು ಪಾರದರ್ಶಕವಾಗಿ ಬಳಕೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಮಾತ್ರ ಸಾಲ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು. ಸಾಲ ಮರುಪಾವತಿ, ಲೆಕ್ಕಪತ್ರ ನಿರ್ವಹಣೆ ಹಾಗೂ ದಾಖಲೆಗಳನ್ನು ನಿಯಮಿತವಾಗಿ ನವೀಕರಿಸುವಂತೆ ಸಿಬ್ಬಂದಿಗೆ ಸೂಚಿಸಿದರು.

ವಿಬಿಜಿ ರಾಮ್ ಜಿ ಯೋಜನೆಯ ಅನುಷ್ಠಾನದಲ್ಲಿಯೂ ಸಂಜೀವಿನಿ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ. ನರೇಗಾ ಯೋಜನೆಗೆ ನೀಡಿದ ಸಹಕಾರದಂತೆಯೇ ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೂ ಸಹಕರಿಸುವಂತೆ ಅವರು ಕರೆ ನೀಡಿದರು.

ಪ್ರತಿ ವಾರ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಸಂಜೀವಿನಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಗ್ರಾಮ ಪಂಚಾಯತಿ ಹಾಗೂ ಸಂಜೀವಿನಿ ಸಿಬ್ಬಂದಿ ನಡುವೆ ಸಮನ್ವಯ ಬೆಳೆಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ವ್ಯವಸ್ಥಾಪಕ (ಕೃಷಿ ಜೀವನೋಪಾಯ) ಮಡ್ಡೇಶ ಮಲೀಮಾರ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮೋಹನಕೃಷ್ಣ, ಸಂಜೀವಿನಿ ಯೋಜನೆಯ ಸಿಬ್ಬಂದಿ ಹಾಗೂ ತಾಲೂಕಿನ 13 ಗ್ರಾಮ ಪಂಚಾಯತಿಗಳ ಮುಖ್ಯ ಪುಸ್ತಕ ಬರಹಗಾರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande