ಹಿರಿಯ ಬಿಜೆಪಿ ನಾಯಕ ರಾಮಚಂದ್ರೇಗೌಡ ನಿಧನ
ಬೆಂಗಳೂರು, 14 ಜುಲೈ (ಹಿ.ಸ.): ಆ್ಯಂಕರ್: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಬಿಜೆ
ದಿವಂಗತ ರಾಮಚಂದ್ರೆಗೌಡ ಸಂಗ್ರಹ ಚಿತ್ರ


ಬೆಂಗಳೂರು, 14 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಬಿಜೆಪಿಯನ್ನು ಕರ್ನಾಟಕದಲ್ಲಿ ತಳಮಟ್ಟದಿಂದ ಸಂಘಟಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಪ್ರಮುಖ ಪಾತ್ರವಹಿಸಿದ್ದ ರಾಮಚಂದ್ರೇಗೌಡರು, 1953ರಲ್ಲಿ ಆರ್‌ಎಸ್‌ಎಸ್‌ಗೆ ಸೇರ್ಪಡೆಗೊಂಡು ಸಾರ್ವಜನಿಕ ಜೀವನ ಆರಂಭಿಸಿ, 1970ರಲ್ಲಿ ರಾಜಕೀಯ ಪ್ರವೇಶಿಸಿದರು.

ಭಾರತೀಯ ಜನಸಂಘದ ಅಭ್ಯರ್ಥಿಯಾಗಿ ಅಂದಿನ ಬೆಂಗಳೂರು ನಗರ ನಿಗಮಕ್ಕೆ ಆಯ್ಕೆಯಾದ ಮೊದಲ ಕಾರ್ಪೊರೇಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅವರು, ನಂತರ ಸತತ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದರು. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ರಾಮಚಂದ್ರೇಗೌಡ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ‌ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸನಲ್ಲಿ ಸಂತಾಪ ಸಂದೇಶ ಹಂಚಿಕೊಂಡಿರುವ ಅವರು, ರಾಮಚಂದ್ರ ಗೌಡ ಅವರ ಅಗಲಿಕೆಯ ಸುದ್ದಿ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ.

ತಮ್ಮ ಸರಳ ವ್ಯಕ್ತಿತ್ವ, ಸಂಘಟನಾ ಕೌಶಲ್ಯ ಮತ್ತು ಕಾರ್ಯಕರ್ತರ ಮೇಲಿನ ಅಪಾರ ಕಾಳಜಿಯಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬದವರು, ಬಂಧು-ಬಳಗ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande